ದೂರಶಿಕ್ಷಣ ವಿದ್ಯಾರ್ಥಿಗಳಿಗೆ ಓರಿಯಂಟೇಶನ್ ಕಾರ್ಯಕ್ರಮ

Update: 2017-02-14 13:02 GMT

ಉಡುಪಿ, ಫೆ.13: ಮಂಗಳೂರು ವಿವಿ ದೂರಶಿಕ್ಷಣ ನಿರ್ದೇಶನಾಲಯದ ಉಡುಪಿಯ ಪ್ರಾದೇಶಿಕ ಕೇಂದ್ರದಲ್ಲಿ 2016-17ನೇ ಸಾಲಿಗೆ ದಾಖಲಾತಿ ಪಡೆದುಕೊಂಡ ಪ್ರಥಮ ಬಿಎ, ಬಿಕಾಂ, ಬಿಬಿಎ ಮತ್ತು ಎಂಎ, ಎಂಕಾಂ ವಿದ್ಯಾರ್ಥಿಗಳಿಗೆ ಓರಿಯಂಟೇಶನ್ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.

ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜರಗಿದ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ.ಬಾಲಕೃಷ್ಣ ಎಸ್. ಹೆಗ್ಡೆ ವಹಿಸಿದ್ದರು. ದೂರಶಿಕ್ಷಣ ಪ್ರಾದೇಶಿಕ ಕೇಂದ್ರದ ಸಂಯೋಜಕ ಡಾ. ದುಗ್ಗಪ್ಪಕಜೆಕಾರ್ ವಿಶ್ವವಿದ್ಯಾನಿಲಯದ ನಿಯಮಾವಳಿಗಳನ್ನು ಮತ್ತು ಪರಿೀಕ್ಷೆಗೆ ಸಂಬಂಧಿಸಿದ ಮಾಹಿತಿ ನೀಡಿದರು.

ಸಂಪನ್ಮೂಲ ವ್ಯಕ್ತಿಗಳಾದ ಡಾ.ಜಿ.ಶಂಕರ್ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕರುಗಳಾದ ಡಾ. ರಾಮದಾಸ ಪ್ರಭು ಮತ್ತು ಪ್ರೊ. ಶ್ರೀಧರ್ ಉಪಸ್ಥಿತರಿದ್ದರು. ವಿವಿಯ ಸಾರ್ವಜನಿಕ ಸಂಪರ್ಕಾಧಿಕಾರಿ ಚಂದ್ರಕಾಂತ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಮಾಜಕಾರ್ಯ ಸ್ನಾತಕೋತ್ತರ ವಿಭಾಗದ ಉಪನ್ಯಾಸಕ ಗಣೇಶ್ ಪ್ರಸಾದ್ ಜಿ. ನಾಯಕ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News