ಟೆಂಪೊ ಢಿಕ್ಕಿ: ಬೈಕ್ ಸವಾರ ಮೃತ್ಯು
Update: 2017-02-14 21:29 IST
ಕೋಟ, ಫೆ.14: ಹಾರ್ದಳ್ಳಿ-ಮಂಡಳ್ಳಿ ಗ್ರಾಮದ ಜನ್ನಾಡಿ ಎಂಬಲ್ಲಿ ಪನ್ನಗ ಮೋಟಾರ್ಸ್ ಶೋ ರೂಮ್ ಎದುರುಗಡೆ ಫೆ.13ರಂದು ಟೆಂಪೊವೊಂದು ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಮೃತಪಟ್ಟಿದ್ದಾರೆ.
ಮೃತರನ್ನು ಬೈಕ್ ಸವಾರ ಸೂರ್ಯನಾರಾಯಣ ಉಡುಪ(51) ಎಂದು ಗುರುತಿಸಲಾಗಿದೆ. ಇವರು ಬೆಳಗ್ಗೆ 11:30ರ ಸುಮಾರಿಗೆ ಹಾಲಾಡಿಯಿಂದ ಬಾರ್ಕೂರಿಗೆ ಹೋಗುತ್ತಿರುವಾಗ ಬಿದ್ಕಲ್ಕಟ್ಟೆ ಕಡೆಯಿಂದ ಹಾಲಾಡಿ ಕಡೆಗೆ ಬರುತ್ತಿದ್ದ 407 ಗೂಡ್ಸ್ ಟೆಂಪೋ ಡಿಕ್ಕಿ ಹೊಡೆಯಿತು.
ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಉಡುಪರನ್ನು ಕೊಟೇಶ್ವರ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ನಂತರ ಹೆಚ್ಚಿನ ಚಿಕಿತ್ಸೆ ಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅವರು ಮಧ್ಯಾಹ್ನ 2:30ರ ಸುಮಾರಿಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು. ಈ ಬಗ್ಗೆ ಕೋಟ ಪೊಲಿೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.