'ಸಾಮಾಜಿಕ ಪ್ರಗತಿಯಲ್ಲಿ ಸಾಹಿತ್ಯ' ವಿಷಯದಲ್ಲಿ ಉಪನ್ಯಾಸ ಕಾರ್ಯಕ್ರಮ
ಬಂಟ್ವಾಳ, ಫೆ. 14: ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ವಿಟ್ಲದ ವಿಠಲ ಪ್ರೌಢಶಾಲೆಯಲ್ಲಿ ಕೂಡೂರು ಕೃಷ್ಣ ಭಟ್ ದತ್ತಿ ಕಾರ್ಯಕ್ರಮದ ಪ್ರಯುಕ್ತ ಸಾಮಾಜಿಕ ಪ್ರಗತಿಯಲ್ಲಿ ಸಾಹಿತ್ಯ ವಿಷಯದಲ್ಲಿ ಉಪನ್ಯಾಸ ಕಾರ್ಯಕ್ರಮ ಮಂಗಳವಾರ ನಡೆಯಿತು.
ತುಂಬೆ ಕಾಲೇಜಿನ ಉಪನ್ಯಾಸಕ ಅಬ್ದುಲ್ ರಹಿಮಾನ್ ಡಿ.ಬಿ. ಉಪನ್ಯಾಸ ನೀಡಿ, ಮನುಷ್ಯನಲ್ಲಿ ಭಾಷೆ ಹುಟ್ಟುವ ಮೊದಲೇ ಸಾಹಿತ್ಯ ಹುಟ್ಟಿದೆ. ಮನುಷ್ಯ ಎಲ್ಲಿಯ ವರೆಗೆ ಬದುಕುತ್ತಾನೆ ಅಲ್ಲಿಯ ವರೆಗೆ ಸಾಹಿತ್ಯ ಬೆಳೆಯುತ್ತದೆ. ಅದು ಮನುಷ್ಯನ ಪ್ರತಿ ವಿಭಾಗದಲ್ಲಿ ಮಾರ್ಗದರ್ಶನ ನೀಡುತ್ತದೆ. ಸಾಹಿತ್ಯವಿಲ್ಲದೆ ಬದುಕಲು ಸಾಧ್ಯವಿಲ್ಲ. ಅರ್ಥವನ್ನು ಕಟ್ಟಿಕೊಡುವುದೇ ಸಾಹಿತ್ಯದ ಕೆಲಸವಾಗಿದೆ. ಅದನ್ನು ಬೆಳೆಸುವ ಕಾರ್ಯ ನಿರಂತರವಾಗಿ ನಡೆಯಬೇಕು ಎಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಕೆ.ಮೋಹನ್ ರಾವ್ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ ಕನ್ನಡಪರ ನಿರಂತರವಾಗಿ ಕನ್ನಡ ಪರ ಕೆಲಸಗಳನ್ನು ಮಾಡುತ್ತಿದೆ. ಕನ್ನಡ ಭಾಷೆಯನ್ನು ಉಳಿಸುವ ಕೆಲಸ ಮಾಡುತ್ತಿದೆ. ಮಕ್ಕಳಲ್ಲಿ ಕನ್ನಡ ಭಾಷೆ, ಕವನ, ಕಥೆಗಳ ಬಗ್ಗೆ ಅರಿವು ಮೂಡಿಸುತ್ತಿದೆ ಎಂದರು.
ಕನ್ನಡ ಭವನದ ಸಂಚಾಲಕ ಗಂಗಾಧರ ಭಟ್, ವಿಠಲ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಆದರ್ಶ ಚೊಕ್ಕಾಡಿ, ವಿಠಲ ಪ್ರೌಢ ಶಾಲಾ ಮುಖ್ಯ ಶಿಕ್ಷಕ ಕಿರಣ್ ಕುಮಾರ್ ಬ್ರಹ್ಮಾವರ, ಮಕ್ಕಳ ಲೋಕದ ಭಾಸ್ಕರ ಅಡ್ವಾಳ, ಪ್ರೌಢ ಶಾಲೆಯ ಕನ್ನಡ ಶಿಕ್ಷಕಿ ಗೀತಾ ಮೊದಲಾದವರು ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸಕ ಸಿ.ಎಚ್.ಸುಬ್ರಹ್ಮಣ್ಯ ಭಟ್ ಪ್ರಸ್ತಾವನೆ ಮಾಡಿದರು. ಕನ್ನಡ ಸಾಹಿತ್ಯ ಪರಿಷತ್‌ನ ಮಾಜಿ ಅಧ್ಯಕ್ಷ ದಯಾನಂದ ಪೆರಾಜೆ ಸ್ವಾಗತಿಸಿದರು. ರಾಜರಾಮ ವರ್ಮ ನಿರೂಪಿಸಿದರು.