ಮಕ್ಕಳ ಪಾಲನಾ ಸಂಸ್ಥೆಗಳ ನೋಂದಣಿಗೆ ಸೂಚನೆ

Update: 2017-02-14 18:37 GMT

ಉಡುಪಿ, ಫೆ.14: ಸರ್ವೋಚ್ಚ ನ್ಯಾಯಾಲಯವು ‘ಬಚ್‌ಪನ್ ಬಚಾವೋ’ ಆಂದೋಲನದ ಅಂಗವಾಗಿ ಸಲ್ಲಿಸಿದ ರಿಟ್ ಅರ್ಜಿಗೆ ಸಂಬಂಧಪಟ್ಟಂತೆ ನೀಡಿರುವ ನಿರ್ದೇಶನದಂತೆ ಮಕ್ಕಳಿಗೆ ರಕ್ಷಣೆ ಕೊಡುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಖಾಸಗಿ ಮಕ್ಕಳ ಪಾಲನಾ ಸಂಸ್ಥೆಗಳು, ಮಕ್ಕಳ ಕಲ್ಯಾಣ ಸಮಿತಿಯ ಮುಖಾಂತರ ಮಾತ್ರ ಮಕ್ಕಳನ್ನು ರಕ್ಷಣೆಗೆ ದಾಖಲು ಮಾಡಬೇಕಿದ್ದು ನೇರವಾಗಿ ಪಡೆಯಲು ಅರ್ಹತೆ ಇಲ್ಲವೆಂದು ಸ್ಪಷ್ಟಪಡಿಸಿದೆ.

 ಇದರೊಂದಿಗೆ ಪಾಲನೆ ಮತ್ತು ರಕ್ಷಣೆ ಅವಶ್ಯವಿರುವ ಮಕ್ಕಳಿಗೆ ಸ್ವಯಂಸೇವಾ ಸಂಸ್ಥೆಗಳು ನಡೆಸುತ್ತಿರುವ ಅನಾಥಾಲಯಗಳು, ಆಶ್ರಯಧಾಮಗಳು, ನಿರ್ಗತಿಕ ಮಕ್ಕಳ ಕುಟೀರ, ಬಾಲಕಾರ್ಮಿಕರಿಗಾಗಿ ನಡೆಸುತ್ತಿರುವ ಬ್ರಿಡ್ಜ್‌ಶಾಲೆಗಳು, ವಿಶೇಷ ದತ್ತು ಕೇಂದ್ರಗಳು, ಉಜ್ವಲ ಕೇಂದ್ರ, ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಮಾನ್ಯತೆ ಪಡೆದ ವಸತಿಯುತ ಸಂಸ್ಥೆಗಳು, ಶೈಕ್ಷಣಿಕ ಸಂಸ್ಥೆಗಳ ವಸತಿ ಶಾಲೆಗಳನ್ನು ಹೊರತು ಪಡಿಸಿ ಎಲ್ಲಾ ರೀತಿಯ ಮಕ್ಕಳ ಪಾಲನಾ ಸಂಸ್ಥೆಗಳನ್ನು ಬಾಲನ್ಯಾಯ ಕಾಯ್ದೆ 2000 ಅಡಿಯಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿ ಕಾರ್ಯನಿರ್ವಹಿಸಬೇಕೆಂದು ಸ್ಪಷ್ಟವಾಗಿ ನಿರ್ದೇಶನ ನೀಡಿದೆ.

ಈ ಹಿನ್ನೆಲೆಯಲ್ಲಿ ಬಾಲನ್ಯಾಯ(ಪಾಲನೆ ಮತ್ತು ರಕ್ಷಣೆ) ಕಾಯ್ದೆಯಡಿ 2015ರಡಿ ಇದುವರೆಗೂ ನೋಂದಣಿ ಮಾಡಿಸಿಕೊಳ್ಳದಿರುವ ಸರಕಾರೇತರ ಸ್ವಯಂಸೇವಾ ಸಂಸ್ಥೆಗಳು ಈ ಕೂಡಲೇ ಜಿಲ್ಲಾ ಮಕ್ಕಳ ರಕ್ಷಣಾಕಾರಿಯನ್ನು ಸಂಪರ್ಕಿಸಿ ನಿಗದಿತ ನಮೂನೆಯನ್ನು ಪಡೆದು ಪ್ರಸ್ತಾವನೆಯನ್ನು ಸಲ್ಲಿಸಬೇಕು. ಈವರೆಗೆ ನೊಂದಣಿಯಾಗದೇ ಇರುವ ಸಂಸ್ಥೆಗಳನ್ನು ಮಾ.21ರೊಳಗೆ ನೋಂದಾಯಿಸುವಂತೆ ಹೇಳಿದೆ.

ಆನಂತರವೂ ನೋಂದಣಿಯಾಗದ ಸಂಸ್ಥೆಗಳ ವಿರುದ್ಧ ಬಾಲನ್ಯಾಯ(ಪಾಲನೆ ಮತ್ತು ರಕ್ಷಣೆ) ಕಾಯ್ದೆ 2015 ಸೆಕ್ಷನ್ 42(1) ರನ್ವಯ 1ವರ್ಷದವರೆಗೆ ಜೈಲು ಶಿಕ್ಷೆ ಅಥವಾ 1ಲಕ್ಷ ರೂ. ದಂಡ ಅಥವಾ ಎರಡೂ ಶಿಕ್ಷೆ ವಿಸಲು ಅವಕಾಶವಿದೆ. ಅಲ್ಲದೇ ನೋಂದಣಿಯನ್ನು ಹಿಂಪಡೆಯಲು ಅಥವಾ ರದ್ದು ಪಡಿಸಲು ಕ್ರಮ ಜರಗಿಸಲಾಗುವುದು. ಒಂದು ವೇಳೆ ಇಂಥ ಸಂಸ್ಥೆಗಳಲ್ಲಿ ಮಕ್ಕಳ ಮೇಲೆ ದೌರ್ಜನ್ಯ ನಡೆದಲ್ಲಿ ಹಾಗೂ ಮಕ್ಕಳ ಹಕ್ಕುಗಳನ್ನು ಉಲ್ಲಂಸಿದಲ್ಲಿ ಸಂಸ್ಥೆಯ ಮುಖ್ಯಸ್ಥರು ನೇರವಾಗಿ ಹೊಣೆಗಾರರಾಗಿರುತ್ತಾರೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

 ಸಾರ್ವಜನಿಕರು ತಮ್ಮ ಆಸುಪಾಸಿನಲ್ಲಿ ಮಕ್ಕಳ ಪಾಲನಾ ಸಂಸ್ಥೆಗಳಿದ್ದಲ್ಲಿ ಇದರ ಮಾಹಿತಿಯನ್ನು ವಿಳಾಸದೊಂದಿಗೆ ಕೂಡಲೇ ಹತ್ತಿರದ ಪೊಲೀಸ್ ಠಾಣೆ/ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ/ಉಪನಿರ್ದೇಶಕರು, ಮಹಿಳಾ ಮತ್ತು ಅಭಿವೃದ್ಧಿ ಇಲಾಖೆ/ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಕಾರಿಗಳು/ ಜಿಲ್ಲಾ ಮಕ್ಕಳ ರಕ್ಷಣಾಕಾರಿಗಳಿಗೆ ತಿಳಿಸಲು ಮನವಿ ಮಾಡಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮಕ್ಕಳ ರಕ್ಷಣಾಕಾರಿಗಳು, ಜಿಲ್ಲಾಮಕ್ಕಳ ರಕ್ಷಣಾ ಘಟಕ, ಬಿ ಬ್ಲಾಕ್, ಮೊದಲ ಮಹಡಿ, ರಜತಾದ್ರಿ, ಮಣಿಪಾಲ ಉಡುಪಿ ಜಿಲ್ಲೆ (ದೂರವಾಣಿ: 0820-2574964) ಇವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಕಾರಿಯವರ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News