ಪರಪ್ಪನ ಅಗ್ರಹಾರದ ಬಳಿ ದಾಂದಲೆ ; ವಾಹನಗಳ ಮೇಲೆ ಕಲ್ಲು ತೂರಾಟ
Update: 2017-02-15 17:53 IST
ಬೆಂಗಳೂರು, ಫೆ.15: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿ ಸುಪ್ರೀಂ ಕೋರ್ಟ್‌ನಿಂದ ನಾಲ್ಕು ವರ್ಷಗಳ ಶಿಕ್ಷೆಗೆ ಗುರಿಯಾಗಿರುವ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ವಿ.ಕೆ.ಶಶಿಕಲಾ ನಟರಾಜನ್ ಅವರು ಇಂದು ಸಂಜೆ ಬೆಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ಶರಣಾಗುವ ವೇಳೆ ನ್ಯಾಯಾಲಯದ ಆವರಣದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ.
ವಿ.ಕೆ.ಶಶಿಕಲಾ ನಟರಾಜನ್ ಪರಪ್ಪನ ಅಗ್ರಹಾರ ಜೈಲಿನ ಆವರಣದಲ್ಲಿ ಸ್ಥಾಪಿಸಲಾದ ವಿಶೇಷ ನ್ಯಾಯಾಲಯದಲ್ಲಿ ನ್ಯಾಯಾಧೀಶ ಅಶ್ವತ್ಥ್ ನಾರಾಯಣ್ ಅವರ ಮುಂದೆ ಹಾಜರಾಗುತ್ತಿದ್ದಂತೆ ಶಶಿಕಲಾ ಬೆಂಬಲಗರ ಕಾರಿನ ಮೇಲೆ ಕಲ್ಲು ತೂರಾಟ ನಡೆದಿದೆ. ಒಟ್ಟು ಆರು ವಾಹನಗಳು ಜಖಂಗೊಂಡಿದೆ. ಜಯಲಲಿತಾ ಬೆಂಬಲಿಗರು ಈ ರೀತಿ ದಾಂದಲೆ ನಡೆಸಿದ್ದಾರೆಂದು ಆರೋಪಿಸಲಾಗಿದೆ. ಪೊಲೀಸರು ಲಾಠಿ ಚಾರ್ಜ್ ನಡೆಸಿ ಪರಿಸ್ಥಿತಿಯನ್ನು ನಿಯಂತ್ರಿಸಿದರು.