ಭಾರತ ರೋಗ ಮುಕ್ತ ದೇಶವಾಗಲಿ: ಅದಮಾರು ಶ್ರೀ
ಉಡುಪಿ, ಫೆ.15: ಎಲ್ಲ ರೋಗಗಳಿಗೂ ಮೂಲ ಆಹಾರ. ಅದನ್ನು ಸರಿಯಾಗಿ, ಹಿತಮಿತವಾಗಿ ಸೇವಿಸಬೇಕು. ಆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಮೂಲಕ ಭಾರತ ದೇಶವನ್ನು ದೈಹಿಕ ಮಾತ್ರವಲ್ಲದೆ ಮಾನಸಿಕ ರೋಗ ಮುಕ್ತವನ್ನಾಗಿಸಬೇಕು ಎಂದು ಅದಮಾರು ಮಠಾಧೀಶ ಶ್ರೀ ವಿಶ್ವಪ್ರಿಯತೀರ್ಥ ಸ್ವಾಮೀಜಿ ಹೇಳಿದ್ದಾರೆ.
ಮಂಗಳೂರು ವಿವಿ ರಾಷ್ಟ್ರೀಯ ಸೇವಾ ಯೋಜನೆ, ಮಂಗಳೂರು ಯೆನ ಪೋಯ ವಿವಿ, ಉಡುಪಿ ಪೂರ್ಣಪ್ರಜ್ಞ ಸಂಧ್ಯಾ ಮತ್ತು ಪೂರ್ಣಪ್ರಜ್ಞ ಕಾಲೇಜುಗಳ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳು, ಉಡುಪಿ ತಲ್ಲೂರು ಫ್ಯಾಮಿಲಿ ಟ್ರಸ್ಟ್‌ನ ಸಹಯೋಗದೊಂದಿಗೆ ಬುಧವಾರ ಉಡುಪಿ ಪೂರ್ಣಪ್ರಜ್ಞ ಆಡಿಟೋರಿಯಂನಲ್ಲಿ ಎನ್‌ಎಸ್‌ಎಸ್ ಸ್ವಯಂ ಸೇವಕರಿಗೆ ಹಮ್ಮಿಕೊಳ್ಳಲಾದ ಕ್ಯಾನ್ಸರ್ ರೋಗ ಅರಿವು ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡುತಿದ್ದರು.
ಯೆನಪೋಯ ಆಸ್ಪತ್ರೆಯ ಡಾ.ಗುರುರಾಜ್ ಭಟ್ ಸಮಾರೋಪ ಭಾಷಣ ಮಾಡಿದರು. ಮಂಗಳೂರು ವಿವಿಯ ಎನ್ನೆಸ್ಸೆಸ್ ಕಾರ್ಯಕ್ರಮ ಸಂಯೋಜನಾಧಿಕಾರಿ ಪ್ರೊ.ವಿನೀತಾ ಕೆ., ಡಾ.ಗಣೇಶ್ ಶೆಣೈ, ಸಂಧ್ಯಾ ಕಾಲೇಜು ಆಡಳಿತ ಮಂಡಳಿ ಕಾರ್ಯದರ್ಶಿ ಪ್ರದೀಪ್ ಕುಮಾರ್, ಪಿಪಿಸಿ ಆಡಳಿತ ಮಂಡಳಿ ಗೌರವ ಕಾರ್ಯದರ್ಶಿ ಡಾ.ಚಂದ್ರಶೇಖರ್, ತಲ್ಲೂರು ಫ್ಯಾಮಿಲಿ ಟ್ರಸ್ಟ್‌ನ ತಲ್ಲೂರು ಶಿವರಾಮ ಶೆಟ್ಟಿ ಮುಖ್ಯ ಅತಿಥಿಗಳಾಗಿದ್ದರು.
ಅಧ್ಯಕ್ಷತೆಯನ್ನು ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ಪ್ರಾಂಶುಪಾಲೆ ಸುಕನ್ಯಾ ಮೇರಿ ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಜಗದೀಶ್ ಶೆಟ್ಟಿ, ಯೆನಪೋಯ ಆಸ್ಪತ್ರೆ ವೈದ್ಯರಾದ ಡಾ.ಇಮ್ರಾನ್ ಪಾಷ, ಡಾ.ರೇಷ್ಮಾ, ಮಂಗಳೂರು ವಿವಿ ಎನ್ನೆಸ್ಸೆಸ್ ಅಧಿಕಾರಿ ಅಶ್ವಿನಿ, ಪಿಪಿಸಿಯ ಎನ್‌ಎಸ್‌ಎಸ್ ಯೋಜನಾಧಿಕಾರಿ ಬಾಲರಾಜ್ ಡಿ.ಬಿ. ಉಪಸ್ಥಿತರಿದ್ದರು.
ಸಂಧ್ಯಾ ಕಾಲೇಜಿನ ಎನ್ನೆಸ್ಸೆಸ್ ಯೋಜನಾಧಿಕಾರಿ ರಮಾನಂದ ರಾವ್ ಸ್ವಾಗತಿಸಿದರು. ಯೋಜನಾಧಿಕಾರಿ ಮಲ್ಲಿಕಾ ಕಾರ್ಯಕ್ರಮ ನಿರೂಪಿಸಿದರು.