ಟೋಲ್ ಸಂಗ್ರಹ: ಬೇಡಿಕೆಗಳ ಈಡೇರಿಕೆಗೆ 25ರ ಗಡುವು

Update: 2017-02-15 18:22 GMT

ಪಡುಬಿದ್ರೆ, ಫೆ.15: ತಲಪಾಡಿ, ಹೆಜಮಾಡಿ ಮತ್ತು ಸಾಸ್ತಾನ ಟೋಲ್‌ಗಳಲ್ಲಿ ಸಾರ್ವಜನಿಕರ ಬೇಡಿಕೆಗಳನ್ನು ೆ.25ರೊಳಗೆ ಈಡೇರಿಸದಿದ್ದಲ್ಲಿ 3 ಟೋಲ್‌ಗಳ ಸಂಯುಕ್ತಾಶ್ರಯದಲ್ಲಿ ಹೋರಾಟವನ್ನು ತೀವ್ರಗೊಳಿಸಲಾಗುವುದು. ಈ ಹೋರಾಟ ನೀರ್ಣಾಯಕ ಎಂದು ಮೂರು ಟೋಲ್‌ಗೇಟ್ ಹೋರಾಟ ಸಮಿತಿ ಎಚ್ಚರಿಸಿದೆ. ಬುಧವಾರ ಪಡುಬಿದ್ರೆಯಲ್ಲಿ ಕರೆದ ಮೂರೂ ಟೋಲ್ ಹೋರಾಟ ಸಮಿತಿಗಳ ಸಂಯುಕ್ತ ಆಶ್ರಯದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಉಡುಪಿ ಗ್ರಾಪಂ ಅಧ್ಯಕ್ಷರ ಒಕ್ಕೂಟದ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ, ಬಾಕಿ ಇರುವ ಕಾಮಗಾರಿಗಳನ್ನು ತಕ್ಷಣ ಪೂರ್ಣಗೊಳಿಸಬೇಕು. ಈ ಬಗ್ಗೆ ಜಿಲ್ಲಾಡಳಿತದೊಂದಿಗೆ ಲಿಖಿತ ಒಪ್ಪಂದ ಮಾಡಿಕೊಳ್ಳಬೇಕು. ಈಗಾಗಲೇ ರಾ.ಹೆ. ಕಾಮಗಾರಿ ವೇಳೆ 300ಕ್ಕೂ ಅಕ ಮಂದಿ ಸಾವನ್ನಪ್ಪಿದ್ದು, ಸಾವಿರಾರು ಮಂದಿ ಗಾಯಗೊಂಡಿದ್ದಾರೆ. ಇವರಿಗೆ ನವಯುಗ ಕಂಪೆನಿ ಸೂಕ್ತ ಪರಿಹಾರ ನೀಡಬೇಕು. ಮೂರು ಟೋಲ್‌ಗಳಲ್ಲಿ ಸ್ಥಳೀಯರಿಗೆ ಪ್ರಥಮ ಆದ್ಯತೆ ಮೇರೆಗೆ ಕೆಲಸ ನೀಡಬೇಕು ಎಂದವರು ಆಗ್ರಹಿಸಿದರು.

ತಲಪಾಡಿ ಕರ್ನಾಟಕ ಗಡಿನಾಡು ರಕ್ಷಣಾ ವೇದಿಕೆಯ ಅಧ್ಯಕ್ಷ ಸಿದ್ಧಿಕ್ ಎ., ಸಾಸ್ತಾನ ರಾ.ಹೆ. ಜಾಗೃತಿ ಸಮಿತಿಯ ಅಧ್ಯಕ್ಷ ಪ್ರತಾಪ್ ಶೆಟ್ಟಿ ಮಾತನಾಡಿದರು.

ಜಿಪಂ ಮಾಜಿ ಅಧ್ಯಕ್ಷ ಕಟಪಾಡಿ ಶಂಕರ ಪೂಜಾರಿ, ಜಿಪಂ ಸದಸ್ಯ ಗೀತಾಂಜಲಿ ಸುವರ್ಣ, ಕಾಪು ಬಿಜೆಪಿ ಕ್ಷೇತ್ರ ಸಮಿತಿಯ ಅಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು. ಕಾಪು ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಅಧ್ಯಕ್ಷ ವಿಶ್ವಾಸ್ ವಿ.ಅಮೀನ್, ಮಿಥುನ್ ಆರ್. ಹೆಗ್ಡೆ, ಲಾರಿ ಮಾಲಕರ ಸಂಘದ ಅಧ್ಯಕ್ಷ ಸಂತೋಷ್ ಹೆಗ್ಡೆ, ಕಿನ್ನಿಗೋಳಿ ಬಸ್ ಮಾಲಕರ ಸಂಘದ ಅದ್ಯಕ್ಷ ದುರ್ಗಾಪ್ರಸಾದ್ ಹೆಗ್ಡೆ, ಉಡುಪಿ ಜಿಲ್ಲಾ ಟ್ಯಾಕ್ಸಿಮೆನ್ ಅಸೋಸಿಯೇಷನ್ ಕಾರ್ಯದರ್ಶಿ ರಮೇಶ್ ಕೋಟ್ಯಾನ್, ಪಡುಬಿದ್ರಿ ಘಟಕದ ಅಧ್ಯಕ್ಷ ರವಿ ಶೆಟ್ಟಿ, ಮುಲ್ಕಿ ಕಾರು ಚಾಲಕ ಮಾಲಕರ ಸಂಘದ ಅಧ್ಯಕ್ಷ ಮಧು ಆಚಾರ್ಯ, ತಾಪಂ ಸದಸ್ಯ ಸಿದ್ದೀಕ್ ತಲಪಾಡಿ, ಮುಖಂಡರಾದ ಸುೀರ್ ಕರ್ಕೇರ, ಯು.ಕೆ.ಅಬ್ದುಲ್ ಹಮೀದ್ ಕನ್ನಂಗಾರು, ಕೇಶವ ಸಾಲ್ಯಾನ್, ದೀಪಕ್ ಎರ್ಮಾಳು, ಗಣೇಶ್ ಕೋಟ್ಯಾನ್, ಸುಧಾಕರ್ ಶೆಟ್ಟಿ, ಸಿರಾಜ್ ಉಚ್ಚಿಲ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News