ಇಂದು ಸಂಜೆಯಿಂದ ಉಳ್ಳಾಲದಲ್ಲಿ ನಿಷೇಧಾಜ್ಞೆ ಜಾರಿ
Update: 2017-02-16 16:06 IST
ಮಂಗಳೂರು, ಫೆ.16: ಉಳ್ಳಾಲದಲ್ಲಿ ಇಂದು ಸಂಜೆಯಿಂದ ಫೆ.25ರ ಮಧ್ಯಾಹ್ನ 12 ಗಂಟೆಯ ವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತ ಎಂ.ಚಂದ್ರಶೇಖರ್ ಅವರು ಆದೇಶಿಸಿದ್ದಾರೆ.
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ, ಕರ್ನಾಟಕ ಇದರ 10ನೆ ವರ್ಷಾಚರಣೆ ಪ್ರಯುಕ್ತ ಉಳ್ಳಾಲದಲ್ಲಿ ಫೆ.17ರಂದು ಆಯೋಜಿಸಿರುವ ಯುನಿಟ್ ಮಾರ್ಚ್ ಸಮಾವೇಶದ ಹಿನ್ನೆಲೆಯಲ್ಲಿ ಈ ಆದೇಶ ಜಾರಿಗೊಳಿಸಲಾಗಿದೆ.
ಶಾಂತಿ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಪಿಎಫ್‌ಐ ರ್ಯಾಲಿಗೆ ಅನುಮತಿ ನಿರಾಕರಿಸಲಾಗಿದೆ. ಅಲ್ಲದೆ, ನಿಷೇಧಾಜ್ಞೆ ಅವಧಿಯಲ್ಲಿ ಎಲ್ಲೂ ಬಹಿರಂಗ ಸಭೆ, ಕಾರ್ಯಕ್ರಮ ನಡೆಸುವಂತಿಲ್ಲ ಎಂದು ಪೊಲೀಸ್ ಆಯುಕ್ತ ಚಂದ್ರಶೇಖರ್ ತಿಳಿಸಿದ್ದಾರೆ.