ಹೊಯ್ಸಳ, ಕೆಳದಿ ಚೆನ್ನಮ್ಮ ಪ್ರಶಸ್ತಿಗಾಗಿ ಅರ್ಜಿ
ಚಿಕ್ಕಮಗಳೂರು, ಫೆ.16: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚಿಕ್ಕಮಗಳೂರು ವತಿಯಿಂದ 2016-17ನೆ ಸಾಲಿನ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಯಾವುದೇ ಕ್ಷೇತ್ರದಲ್ಲಿ ನಾವೀನ್ಯತೆ, ತಾರ್ಕಿಕ, ಸಾಧನೆ ಮಾಡಿದ ಮಕ್ಕಳಿಗೆ ಜಿಲ್ಲಾ ಮಟ್ಟದ ಪ್ರಶಸ್ತಿಯನ್ನು ಜಿಲ್ಲಾ ಮಟ್ಟದಲ್ಲಿ ಪ್ರತಿ ಕ್ಷೇತ್ರಕ್ಕೆ ಇಬ್ಬರಂತೆ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು 9 ರಿಂದ 16 ವರ್ಷ ವಯೋಮಿತಿ ಹೊಂದಿರಬೇಕು. ಸಮಾಜ ಕ್ಷೇತ್ರಗಳಲ್ಲಿ ಅಸಾಧಾರಣ ಪ್ರತಿಭೆ ಹೊಂದಿರಬೇಕು. ಜನನ ಪ್ರಮಾಣ ಪತ್ರಕ್ಕೆ ಅಧಿಕಾರಿಗಳಿಂದ ದೃಢೀಕರಿಸಿರಬೇಕು. ಪ್ರತಿಭೆಯನ್ನು ಹೊಂದಿರುವ ಕುರಿತು ಪ್ರಮುಖ ದಿನ ಪತ್ರಿಕೆಗಳಲ್ಲಿ ಪ್ರಕಟಗೊಂಡಿರುವ ಪತ್ರಿಕೆಯ ತುಣುಕು ಪ್ರಮಾಣ ಪತ್ರಗಳನ್ನು ಲಗತ್ತಿಸಿರಬೇಕು.
ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದಿರುವ ಮಾಹಿತಿಯನ್ನು ಲಗತ್ತಿಸಬೇಕು. ಹಿಂದಿನ ವರ್ಷಗಳಲ್ಲಿ ಜಿಲ್ಲಾ ಮಟ್ಟದ ಪ್ರಶಸ್ತಿ ಪಡೆದ ಮಕ್ಕಳು ಅರ್ಜಿ ಸಲ್ಲಿಸುವಂತಿಲ್ಲ. ಅರ್ಜಿ ಸಲ್ಲಿಸುವವರು ಕರ್ನಾಟಕದಲ್ಲಿ ನೆಲೆಸಿರಬೇಕು. ಮಗುವಿನ ಭಾವ ಚಿತ್ರವನ್ನು ಲಗತ್ತಿಸಬೇಕು. ಸಾಧಿಸಿರುವ ಪ್ರತಿಭೆಯನ್ನು ಸಮರ್ಥಿಸಲು ಪೂರಕ ದಾಖಲೆಗಳನ್ನು ಸಲ್ಲಿಸಬೇಕು.
ಅರ್ಜಿಯನ್ನು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, 1ನೆ ಮಹಡಿ, ಜಿಪಂ ಕಟ್ಟಡ, ಚಿಕ್ಕಮಗಳೂರು ಇಲ್ಲಿ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಫೆಬ್ರವರಿ 28 ರ ಸಂಜೆ 5.30 ರೊಳಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:220930 ಅಥವಾ 220950 ನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.