×
Ad

ನಾಳೆ ಕರ್ಣಾಟಕ ಬ್ಯಾಂಕ್ ಸಂಸ್ಥಾಪಕರ ದಿನಾಚರಣೆ

Update: 2017-02-16 23:43 IST

ಮಂಗಳೂರು, ಫೆ.16: ಕರ್ಣಾಟಕ ಬ್ಯಾಂಕ್ ಸಂಸ್ಥಾಪಕರ ದಿನಾಚರಣೆ ಫೆ.18ರಂದು ಸಂಜೆ 4:30ಕ್ಕೆ ಪಂಪ್‌ವೆಲ್ ವೃತ್ತದ ಬಳಿ ಇರುವ ಕರ್ಣಾಟಕ ಬ್ಯಾಂಕ್ ಪ್ರಧಾನ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ.

ಸಮಾರಂಭದಲ್ಲಿ ಮಣಿಪಾಲ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಡಾ.ಬಿ.ಎಂ.ಹೆಗ್ಡೆ ‘ಮಾನವ-ಹಣ ಮತ್ತು ಸಂತೋಷ’ ಎಂಬ ವಿಷಯದ ಬಗ್ಗೆ ಉಪನ್ಯಾಸ ನೀಡಲಿದ್ದಾರೆ. ಇದೇ ಸಂದರ್ಭ ಪ್ರಿಯಾ ಸಹೋದರಿಯರ ಕರ್ಣಾಟಕ ಶಾಸೀಯ ಸಂಗೀತ ಕಾರ್ಯಕ್ರಮ ನಡೆಯಲಿದೆ. ಬ್ಯಾಂಕ್‌ನ ಆಡಳಿತ ನಿರ್ದೇಶಕ ಹಾಗೂ ಮುಖ್ಯಕಾರ್ಯನಿರ್ವಹಣಾಕಾರಿ ಪಿ.ಜಯರಾಮ ಭಟ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News