×
Ad

ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಸಭೆ

Update: 2017-02-17 18:32 IST

ಉಡುಪಿ, ಫೆ.17: ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಸಭೆಯು ಶುಕ್ರವಾರ ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ಜರಗಿತು.

ಸಭೆಯಲ್ಲಿ ರಾಜ್ಯಸಭಾ ಸದಸ್ಯ ಓಸ್ಕರ್ ಫೆರ್ನಾಂಡಿಸ್, ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹಾಗೂ ಬೈಂದೂರು ಶಾಸಕ ಗೋಪಾಲ ಪೂಜಾರಿ, ವಿಧಾನ ಪರಿಷತ್ ಸದಸ್ಯ ಕೆ.ಪ್ರತಾಪಚಂದ್ರ ಶೆಟ್ಟಿ, ಮಾಜಿ ಶಾಸಕ ಗೋಪಾಲ ಭಂಡಾರಿ ಮಾತನಾಡಿದರು.

ಸಭೆಯಲ್ಲಿ ರಾಜ್ಯ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಎ. ಗಫೂರ್, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ವರೋನಿಕಾ ಕರ್ನೆಲಿಯೋ, ಮುಖಂಡರಾದ ಕೃಷ್ಣರಾಯ ಸರಳಾಯ, ಮುರಳಿ ಶೆಟ್ಟಿ, ಶ್ಯಾಮಲಾ ಭಂಡಾರಿ, ಅಶೋಕ್ ಕೊಡವೂರು, ಜಯಶ್ರೀ ಕೃಷ್ಣರಾಜ್, ಸರಳಾ ಕಾಂಚನ್, ಬ್ಲೊಸಂ ಫೆರ್ನಾಂಡಿಸ್, ನರಸಿಂಹಮೂರ್ತಿ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News