ಸಮುದ್ರಕ್ಕೆ ಬಿದ್ದು ವ್ಯಕ್ತಿ ಮೃತ್ಯು
Update: 2017-02-17 23:49 IST
ಕುಂದಾಪುರ, ೆ.17: ಕೋಡಿ ಕಡಲ ತೀರದಲ್ಲಿ ವಾಯುವಿಹಾರಕ್ಕಾಗಿ ನಡೆದು ಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ನೀರಿನ ಸೆಳೆತಕ್ಕೆ ಸಿಕ್ಕಿ ಮೃತಪಟ್ಟಿದ್ದಾರೆ.
ಮೃತರನ್ನು ಮಂಜು ಪೂಜಾರಿ(65) ಎಂದು ಗುರುತಿಸಲಾಗಿದೆ. ಇವರು ತನ್ನ ಮೂಲ ಮನೆಯಾದ ಕುಂದಾಪುರ ಕೋಡಿಗೆ ೆ.13ರಂದು ಬಂದವರು ಅದೇ ದಿನ ಸಂಜೆ ವಾಯುವಿಹಾರಕ್ಕಾಗಿ ಸಮುದ್ರ ತೀರಕ್ಕೆ ಬಂದಿದ್ದರು. ಆಗ ಸಮುದ್ರದ ನೀರು ಅಪ್ಪಳಿಸಿದ ಪರಿಣಾಮ ಅವರು ನೀರಿನ ಸೆಳೆತಕ್ಕೆ ಸಿಲುಕಿ ಅಸ್ವಸ್ಥರಾದರು. ತಕ್ಷಣ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ೆ.16ರಂದು ಬೆಳಗಿನ ಜಾವ 3ಗಂಟೆ ಸುಮಾರಿಗೆ ಚಿಕಿತ್ಸೆ ಲಕಾರಿಯಾಗದೆ ಮೃತಪಟ್ಟರು. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.