ಭಗವಂತನ ಪ್ರತಿಯೊಂದು ಸೃಷ್ಠಿ ದೋಷರಹಿತ: ಪಲಿಮಾರು ಶ್ರೀ
ಉಡುಪಿ, ಪೆ. 17: ಕಣ್ಣಿಗೆ ಕಾಣುವ ವಿಶ್ವದ ಮೂಲಕ ಕಾಣದ ಭಗವಂತ ನನ್ನು ತಿಳಿದುಕೊಳ್ಳಬೇಕು. ಭಗವಂತನ ಪ್ರತಿಯೊಂದು ಸೃಷ್ಠಿಯು ದೋಷ ರಹಿತ ಮತ್ತು ಪರಿಪೂರ್ಣ. ಇಂತಹ ಸೃಷ್ಠಿಯು ಮನುಷ್ಯನಿಂದ ಸಾಧ್ಯವಿಲ್ಲ ಎಂದು ಪಲಿಮಾರು ಮಠಾಧೀಶ ಶ್ರೀವಿದ್ಯಾಧೀಶ ತೀರ್ಥ ಸ್ವಾಮೀಜಿ ಹೇಳಿದ್ದಾರೆ.
ಶುಕ್ರವಾರ ನಡೆದ ಬಂಟಕಲ್ ಶ್ರೀಮಧ್ವ ವಾದಿರಾಜ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನೋಲಜಿ ಆ್ಯಂಡ್ ಮ್ಯಾನೇಜ್‌ಮೆಂಟ್ ಸಂಸ್ಥೆಯ 7ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಅವರು ಆಶೀರ್ವಚನ ನೀಡಿದರು.
ಮುಖ್ಯಅತಿಥಿಗಳಾಗಿ ಬೆಂಗಳೂರಿನ ನಂದಿ ಇನ್‌ಫ್ರಾಸ್ಟ್ರಕ್ಚರ್ ಕೊರಿಡಾರ್ ಎಂಟರ್‌ಪ್ರೈಸಸ್ ಸಂಸ್ಥೆಯ ಉಪಾಧ್ಯಕ್ಷ ಮಂಜುನಾಥ್ ನಾಯಕೆರ್ ಮಾತ ನಾಡಿದರು. ಸೋದೆ ವಾದಿರಾಜ ಮಠ ಶಿಕ್ಷಣ ಟ್ರಸ್‌ನ ಅಧ್ಯಕ್ಷ ಶ್ರೀವಿಶ್ವವಲ್ಲಭ ತೀರ್ಥ ಸ್ವಾಮೀಜಿ ಅಧ್ಯಕ್ಷತೆಯನ್ನು ವಹಿಸಿದ್ದರು.
ವಿವಿಧ ದತ್ತಿನಿಧಿಗಳಿಂದ ವಿದ್ಯಾರ್ಥಿ ವೇತನಗಳನ್ನು ವಿತರಿಸಲಾಯಿತು.ಅಂತಿಮ ವರ್ಷದ ಉತ್ತಮ ಸಾಧಕ ವಿದ್ಯಾರ್ಥಿಗಳಿಗೆ ನೀಡುವ ಶ್ರೀಮಧ್ವ ವಾದಿರಾಜ ಪ್ರಶಸ್ತಿಯನ್ನು ಸಿವಿಲ್ ಇಂಜಿನಿಯರಿಂಗ್ ವಿಭಾಗದ ಭುವನ ಮಿತ್ರ ಎಸ್. ಹಾಗೂ ವಿದ್ಯುನ್ಮಾನ ಮತ್ತು ಸಂಹವನ ವಿಭಾಗದ ಅನುಷಾ ಪೈ ಅವರಿಗೆ ಪ್ರದಾನ ಮಾಡಲಾಯಿತು.
ಟ್ರಸ್ಟ್ ಸದಸ್ಯ ಎಚ್.ವಿ.ಗೌತಮ, ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಅಖಿಲಾ ವಿ.ರಾವ್, ಕಾರ್ಯದರ್ಶಿ ಉಜ್ವಲ ಶೆಟ್ಟಿ ಉಪಸ್ಥಿತರಿದ್ದರು. ಸೋದೆ ವಾದಿ ರಾಜ ಮಠ ಶಿಕ್ಷಣ ಟ್ರಸ್ಟ್‌ನ ಕಾರ್ಯದರ್ಶಿ ರತ್ನಕುಮಾರ್ ಸ್ವಾಗತಿಸಿದರು.
ಪ್ರಾಂಶುಪಾಲ ಪ್ರೊ.ಡಾ.ತಿರುಮಲೇಶ್ವರ ಭಟ್ ವಾರ್ಷಿಕ ವರದಿ ವಾಚಿಸಿ ದರು. ಸಿಜು ವಿ.ಸೋಮನ್ ವಂದಿಸಿದರು. ವಾಣಿ ಭಟ್ ಮತ್ತು ತನುಷಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಕಾಲೇಜಿನ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿದವು.