×
Ad

ನಾಗಾಲ್ಯಾಂಡ್ ಮುಖ್ಯಮಂತ್ರಿ ರಾಜೀನಾಮೆ

Update: 2017-02-19 19:44 IST

ಹೊಸದಿಲ್ಲಿ, ಫೆ.19: ನಾಗಾಲ್ಯಾಂಡ್ ಮುಖ್ಯಮಂತ್ರಿ ಟಿ.ಆರ್.ಝೆಲಿಯಂಗ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ನಾಗಾಲ್ಯಾಂಡ್‌ನಲ್ಲಿ ಕಾಂಗ್ರೆಸ್ ನೇತೃತ್ವದ ಸರಕಾರವಿದೆ.

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ನೀಡಲಾಗಿರುವ ಮೀಸಲಾತಿಯನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ವಿವಿಧ ಬುಡಕಟ್ಟು ಸಂಘಟನೆಗಳು, ಶುಕ್ರವಾರದ ಒಳಗೆ ಮುಖ್ಯಮಂತ್ರಿ ರಾಜೀನಾಮೆ ನೀಡದಿದ್ದರೆ ಪ್ರತಿಭಟನೆ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದವು. ಈ ಹಿನ್ನೆಲೆಯಲ್ಲಿ ಮುಖ್ಯಮಂತಿ್ರ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.

ಸೋಮವಾರ ಪಕ್ಷದ ಸಭೆಯನ್ನು ಕರೆಯಲಾಗಿದ್ದು ನೂತನ ಮುಖ್ಯಮಂತ್ರಿಯ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಪಕ್ಷದ ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News