×
Ad

ಐಪಿಎಲ್‌ನಿಂದ ಸ್ಟಾರ್ಕ್ ಔಟ್

Update: 2017-02-19 23:28 IST

ಹೊಸದಿಲ್ಲಿ, ಫೆ.19: ಆಸ್ಟ್ರೇಲಿಯದ ವೇಗದ ಬೌಲರ್ ಮಿಚೆಲ್ ಸ್ಟಾರ್ಕ್ ಈ ವರ್ಷ ನಡೆಯಲಿರುವ ಐಪಿಎಲ್ ಟೂರ್ನಿಯಿಂದ ಹೊರ ನಡೆದಿದ್ದಾರೆ. ಈ ಮೂಲಕ ತನ್ನ ಫ್ರಾಂಚೈಸಿ ರಾಯಲ್ ಚಾಲೆಂಜರ್ಸ್‌ ಬೆಂಗಳೂರಿನ ನಂಟನ್ನು ಕಡಿದುಕೊಂಡಿದ್ದಾರೆ.

ಸೋಮವಾರ ಬೆಂಗಳೂರಿನಲ್ಲಿ 10ನೆ ಆವೃತ್ತಿಯ ಐಪಿಎಲ್‌ಗೆ ಆಟಗಾರರ ಹರಾಜು ಪ್ರಕ್ರಿಯೆ ಆರಂಭಕ್ಕೆ ಮೊದಲು ಈ ಬೆಳವಣಿಗೆಯಾಗಿದೆ.

ಎಡಗೈ ವೇಗಿ ಸ್ಟಾರ್ಕ್ 2014ರಿಂದ ಆರ್‌ಸಿಬಿ ಫ್ರಾಂಚೈಸಿಯಲ್ಲಿದ್ದಾರೆ. ಕಳೆದ ವರ್ಷ ಕಾಲುನೋವಿನಿಂದಾಗಿ ಇಡೀ ಟೂರ್ನಿಯಿಂದ ಹೊರಗುಳಿದಿದ್ದರು. 2014ರಲ್ಲಿ 14 ವಿಕೆಟ್‌ಗಳನ್ನು, 2015ರಲ್ಲಿ 20 ವಿಕೆಟ್‌ಗಳನ್ನು ಪಡೆದಿದ್ದಾರೆ. ಪ್ರಸ್ತುತ ಅವರು ಭಾರತ ವಿರುದ್ಧ ಟೆಸ್ಟ್ ಸರಣಿಯಲ್ಲಿ ಪಾಲ್ಗೊಳ್ಳಲು ಬಂದಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News