ಕೊಳವೆಬಾವಿ ಕೊರೆಸುವುದಕ್ಕೆ ನಿಷೇಧ

Update: 2017-02-19 18:21 GMT

ಕಾಸರಗೋಡು, ಫೆ.19: ಕೇರಳದಲ್ಲಿ ಕೊಳವೆಬಾವಿ ಕೊರೆಯಲು ಕಂದಾಯ ಇಲಾಖೆ ತಾತ್ಕಾಲಿಕ ನಿಷೇಧ ಹೇರಿ ಆದೇಶ ಹೊರಡಿಸಿದೆ. ಮೇ ಕೊನೆ ತನಕ ಕೊಳವೆಬಾವಿ ಕೊರೆಯಲು ಅನುಮತಿ ನೀಡದಂತೆ ಜಿಲ್ಲಾಡಳಿತಕ್ಕೆ ಆದೇಶ ನೀಡ ಲಾಗಿದೆ.

ರಾಜ್ಯದಲ್ಲಿ ತೀವ್ರಗೊಳ್ಳುತ್ತಿರುವ ಬರದ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸ ಲಾಗಿದ್ದು, ಇದು ಉಲ್ಲಂಘನೆಯಾಗದಂತೆ ನಿಗಾ ವಹಿಸುವಂತೆ ಆದೇಶದಲ್ಲಿ ತಿಳಿ ಸಲಾಗಿದೆ. ಕೊಳವೆಬಾವಿಯಿಂದ ಅಂತರ್ಜಲ ಮಟ್ಟ ಕುಸಿಯುತ್ತಿರುವುದು ಈ ಬಗ್ಗೆ ನಡೆಸಿರುವ ಅಧ್ಯಯನದಲ್ಲಿ ಸ್ಪಷ್ಟಗೊಂಡಿರುವ ಹಿನ್ನೆಲೆಯಲ್ಲಿ ಸರಕಾರ ಈ ಕಠಿಣ ಕ್ರಮಕ್ಕೆ ಮುಂದಾಗಿದೆ.

ನೀರಿನ ಸಮಸ್ಯೆ ಎದುರಿಸುತ್ತಿರುವ ಪ್ರದೇಶಗಳಿಗೆ ಟ್ಯಾಂಕರ್ ಲಾರಿಗಳಲ್ಲಿ ನೀರು ಪೂರೈಸಲು ಕ್ರಮ ಕೈಗೊಳ್ಳುವ ಅಧಿಕಾರವನ್ನು ರಾಜ್ಯ ಸಚಿವ ಸಂಪುಟವು ಜಿಲ್ಲಾಧಿಕಾರಿಗಳಿಗೆ ನೀಡಿದೆ. ಇದೇ ವೇಳೆ ನೀರಿನ ದುರ್ಬಳಕೆ ತಡೆಗಟ್ಟಲು ನೀರು ಪೂರೈಸುವ ವಾಹನಗಳಿಗೆ ಜಿಪಿಎಸ್ ಅಳವಡಿಸುವುದನ್ನು ಕಡ್ಡಾಯಗೊಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News