ಸ್ಟಾಲಿನ್, ಡಿಎಂಕೆ ನಾಯಕರ ವಿರುದ್ಧ ಎಫ್‌ಐಆರ್ ದಾಖಲು

Update: 2017-02-19 18:27 GMT

ಚೆನ್ನೈ, ಫೆ.19: ತಮಿಳುನಾಡು ವಿಧಾನಸಭೆಯಲ್ಲಿ ತಮ್ಮ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಮರೀನಾ ಬೀಚ್‌ನಲ್ಲಿ ಪ್ರತಿಭಟನೆ ನಡೆಸಿದ ಕಾರಣಕ್ಕೆ ಡಿಎಂಕೆ ಕಾರ್ಯಾಧ್ಯಕ್ಷ ಎಂ.ಕೆ.ಸ್ಟಾಲಿನ್, ಪಕ್ಷದ ಶಾಸಕರು, ಸಂಸದರು ಮತ್ತು ವಿವಿಧ ಪದಾಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಅಕ್ರಮವಾಗಿ ಸಭೆ ಸೇರಿದ್ದು ಮತ್ತು ಸರಕಾರದ ಆದೇಶವನ್ನು ಉಲ್ಲಂಘಿಸಿದ ಕಾರಣಕ್ಕೆ ಇವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಕಾನೂನಿನ ಪ್ರಕಾರ, ಪ್ರತಿಭಟನೆ ನಡೆಸುವ ಮೊದಲು ಅನುಮತಿ ಪಡೆಯಬೇಕಿತ್ತು. ಸ್ಟಾಲಿನ್ ಅವರಲ್ಲದೆ, 63 ಶಾಸಕರು, ಮೂವರು ಸಂಸದರು ಹಾಗೂ ಹಲವಾರು ಪದಾಧಿಕಾರಿಗಳ ಹೆಸರನ್ನು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸ್ಟಾಲಿನ್ ನೇತೃತ್ವದಲ್ಲಿ ಮರೀನಾದಲ್ಲಿ ನಡೆದ ಪ್ರತಿಭಟನೆ ವೇಳೆ ಡಿಎಂಕೆಯ ಕಾರ್ಯಕರ್ತರು ರಸ್ತೆ ತಡೆ ನಡೆಸಿದ್ದರಲ್ಲದೆ ರಾಜ್ಯದ ಹಲವೆಡೆ ಕಲ್ಲುತೂರಾಟ ನಡೆಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News