ಮಂಗಳೂರು: ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಪ್ರಗತಿ ಪರಿಶೀಲನಾ ಸಭೆ
Update: 2017-02-20 18:13 IST
ಮಂಗಳೂರು, ಫೆ.20: ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಅನುಷ್ಠಾನಗೊಳ್ಳುತ್ತಿರುವ ವಿವಿಧ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ಪ್ರಾಧಿಕಾರದ ಅಧ್ಯಕ್ಷೆ, ಶಾಸಕಿ ಶಾರದಾ ಮೋಹನ ಶೆಟ್ಟಿಯ ಅಧ್ಯಕ್ಷತೆಯಲ್ಲಿ ನಡೆಯಿತು.
ಪ್ರಾಧಿಕಾರದ ಕಾಮಗಾರಿಗಳು ನಿಧಾನಗತಿಯಲ್ಲಿ ಸಾಗುತ್ತಿರುವ ಕುರಿತು ಅಧ್ಯಕ್ಷೆ ಶಾರದಾ ಮೋಹನ ಶೆಟ್ಟಿ ಅಸಮಾಧಾನವನ್ನು ವ್ಯಕ್ತಪಡಿಸಿ ಯೋಜನಾ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಪ್ರಾಧಿಕಾರದ ಕಾರ್ಯದರ್ಶಿ ಪ್ರದೀಪ್ ಡಿಸೋಜ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಮನೋಹರ ಎ.ಕಳಸ, ವ್ಯವಸ್ಥಾಪಕ ಮಂಜುನಾಥ ಶೆಟ್ಟಿ, ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗ ಹಾಗೂ ಮನಪಾ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.