×
Ad

ಮುಡಿಪು: ಫೆ.23ರಂದು ವಿವಿ ಮಟ್ಟದ ಅಂತರ್‌ಕಾಲೇಜು ಹಗ್ಗಜಗ್ಗಾಟ ಪಂದ್ಯಾಟ

Update: 2017-02-20 18:17 IST

ಮುಡಿಪು: ಮುಡಿಪುವಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಆಶ್ರಯದಲ್ಲಿ ವಿಶ್ವವಿದ್ಯಾಲಯದ ಮಟ್ಟದ ಅಂತರ್ ಕಾಲೇಜು ಪುರುಷರ ಹಗ್ಗಜಗ್ಗಾಟ ಪಂದ್ಯಾಟವು ಫೆ.23 ರಂದು ಮುಡಿಪು ಕಾಲೇಜಿನಲ್ಲಿ ನಡೆಯಲಿದೆ.

ಪಂದ್ಯಾಟವನ್ನು ಸಚಿವ ಯು.ಟಿ.ಖಾದರ್ ಅವರು ಉದ್ಘಾಟಿಸಲಿದ್ದು, ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಪ್ರಶಾಂತ್ ಕಾಜವ ಉಪಸ್ಥಿತರಿರುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ.ಗಿರಿಧರ್ ರಾವ್ ಅವರು ವಹಿಸಲಿದ್ದಾರೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News