×
Ad

ಸಾಮಾಜಿಕ ನ್ಯಾಯ ಎಂಬುದು ಅಸ್ತಿತ್ವದ ಪ್ರಶ್ನೆ: ವೆಂಕಟೇಶ್ ನಾಯ್ಕ

Update: 2017-02-20 18:26 IST

ಉಡುಪಿ, ಫೆ.20: ಸಾಮಾಜಿಕ ನ್ಯಾಯ ಎಂಬುದು ಪ್ರತಿಭೆ ಕೇಂದ್ರೀಕೃತ ವಲ್ಲ. ಅದು ಸಾಮಾಜಿಕ ಅಸ್ತಿತ್ವದ ಪ್ರಶ್ನೆಯಾಗಿದೆ ಎಂದು ಉಡುಪಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ವೆಂಕಟೇಶ್ ನಾಯ್ಕ ಟಿ. ಹೇಳಿದ್ದಾರೆ.

ಉಡುಪಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ ಮತ್ತು ಕುಂಜಿಬೆಟ್ಟು ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಮಹಾವಿದ್ಯಾಲಯದ ಸಭಾಂಗಣದಲ್ಲಿ ಸೋಮವಾರ ಆಯೋಜಿಸಲಾದ ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಜಗತ್ತಿನಲ್ಲಿ ಅಸಮಾನತೆ, ಬಡತನ, ಧರ್ಮ, ಸಂಸ್ಕೃತಿಯ ಆಧಾರದ ಮೇಲೆ ನ್ಯಾಯದ ಸರಿಯಾದ ಪರಿಕಲ್ಪನೆ ಇಲ್ಲ ಎಂಬ ಕಾರಣಕ್ಕಾಗಿ ಸಾಮಾಜಿಕ ನ್ಯಾಯ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಸಾಮಾಜಿಕ, ಸಾಂಸ್ಕೃತಿಕ, ಆಡಳಿತಾತ್ಮಕವಾಗಿ ನ್ಯಾಯ ದೊರಕಿಸುವುದು ಇದರ ಉದ್ದೇಶವಾಗಿದೆ ಎಂದು ಅವರು ತಿಳಿಸಿದರು.

ಕಾನೂನು ವಿದ್ಯಾರ್ಥಿಗಳು ನ್ಯಾಯಾಲಯ, ಕಾರ್ಯಕಲಾಪ, ಕಾನೂನು ಗಳನ್ನು ಸರಿಯಾಗಿ ಅರ್ಥೈಸುವುದರ ಜೊತೆಗೆ ನ್ಯಾಯದ ದೇಗುಲವಾಗಿ ರುವ ನ್ಯಾಯಾಲಯಕ್ಕೆ ಗೌರವ ನೀಡಬೇಕು. ಈ ಮೂಲಕ ಶಿಸ್ತನ್ನು ಮೈಗೂಡಿಸಿ ಕೊಳ್ಳುವುದು ಮುಖ್ಯ. ಜ್ಞಾನ ದಾಹ ಇಲ್ಲದಿದ್ದರೆ ಜೀವನದಲ್ಲಿ ಮುಂದುವರೆಯಲು ಸಾಧ್ಯವಿಲ್ಲ ಎಂದರು.

ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಶಿವರಾಂ ಕೆ., ಹಿರಿಯ ಸಿವಿಲ್ ನ್ಯಾಯಾಧೀಶೆ ಲತಾ, ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶ ರಾಜೇಶ್ ಕರ್ಣಂ, ಪ್ರಧಾನ ಸಿವಿಲ್ ನ್ಯಾಯಾಧೀಶೆ ವಿ. ಎನ್.ಮಿಲನ, 2ನೆ ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಝರೀಫಾ ಬಾನು ಮುಖ್ಯ ಅತಿಥಿಗಳಾಗಿದ್ದರು.

ಅಧ್ಯಕ್ಷತೆಯನ್ನು ಮಹಾವಿದ್ಯಾಲಯದ ಪ್ರಾಂಶುಪಾಲ ಪ್ರೊ.ಪ್ರಕಾಶ್ ಕಣಿವೆ ವಹಿಸಿದ್ದರು. ವಿದ್ಯಾರ್ಥಿ ಕಲ್ಯಾಣ ಸಮಿತಿಯ ಪ್ರೊ.ರೋಹಿತ್ ಅಮೀನ್ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಸಹಾನ ಸ್ವಾಗತಿಸಿದರು. ಆಯಿಷಾ ರಾವ್ ವಂದಿಸಿದರು. ನಿವೇದಿತಾ ಬಾಳಿಗಾ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News