ಮೆಹಫಿಲೇ ತ್ವಯ್ಬಾ ದ್ಸಿಕ್ರ್ ಮಜ್ಲಿಸ್ ಉದ್ಘಾಟನಾ ಸಮಾರಂಭ
ಉಳ್ಳಾಲ, ಫೆ.21: ಎಸ್ ವೈಎಸ್ ಅಕ್ಕರೆಕೆರೆ ಹಳೆಕೋಟೆ ಶಾಖೆ ಹಾಗೂ ಎಸ್ಸೆಸ್ಸೆಫ್ ಅಕ್ಕರೆಕೆರೆ ಶಾಖೆಯ ಜಂಟಿ ಆಶ್ರಯದಲ್ಲಿ ಮೆಹಫಿಲೇ ತ್ವಯ್ಬಾ ದ್ಸಿಕ್ರ್ ಮಜ್ಲಿಸ್ ಉದ್ಘಾಟನಾ ಸಮಾರಂಭ ಎಸ್ ವೈ ಎಸ್ ಅಕ್ಕರೆಕೆರೆ ಹಳೆಕೋಟೆ ಘಟಕಾಧ್ಯಕ್ಷ ಅಬ್ದುಸ್ಸಮದ್ ಹಳೆಕೋಟೆ ಇವರ ಅಧ್ಯಕ್ಷತೆಯಲ್ಲಿ ಇಲ್ಲಿನ ಸ್ಟೂಡೆಂಟ್ಸ್ ಹೌಸ್ ನಲ್ಲಿ ನಡೆಯಿತು.
ಎಸ್ ವೈ ಎಸ್ ಮೇಲಂಗಡಿ ಶಾಖೆ ಅಧ್ಯಕ್ಷ ಬಶೀರ್ ಸಖಾಫಿ ಉಳ್ಳಾಲ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮೆಹಫಿಲೇ ತ್ವಯ್ಬಾ ಕಾರ್ಯಕ್ರಮಕ್ಕೆ ಎಸ್ ವೈ ಎಸ್ ಉಳ್ಳಾಲ ಸೆಂಟರ್ ನೂತನಾಧ್ಯಕ್ಷ ಸಯ್ಯಿದ್ ಜಲಾಲ್ ತಂಙಳ್ ಅಳೇಕಲ ನೇತೃತ್ವ ನೀಡಿದರು. ಇದೇ ಸಂದರ್ಭದಲ್ಲಿ ಎಸ್ ವೈ ಎಸ್ ಅಕ್ಕರೆಕೆರೆ ಹಳೆಕೋಟೆ ಬ್ರಾಂಚ್ ವತಿಯಿಂದ ಸಯ್ಯಿದ್ ಜಲಾಲ್ ತಂಙಳ್ ರನ್ನು ಶಾಲುಹೊದಿಸಿ ಅಭಿನಂದಿಸಿ ಸನ್ಮಾನಿಸಲಾಯಿತು.
ಎಸ್ ವೈಎಸ್ ಅಕ್ಕರೆಕೆರೆ ಹಳೆಕೋಟೆ ಬ್ರಾಂಚ್ ಕೋಶಾಧಿಕಾರಿ ಅಬ್ದುರ್ರಹ್ಮಾನ್ ಅಕ್ಕರೆಕೆರೆ, ಎಸ್ ವೈಎಸ್ ಉಳ್ಳಾಲ ಸೆಂಟರ್ ಕಾರ್ಯದರ್ಶಿ ಮನ್ಸೂರ್ ಅಹ್ಮದ್ ಹಳೆಕೋಟೆ, ಎಸ್ ವೈಎಸ್ ಅಕ್ಕರೆಕೆರೆ ಹಳೆಕೋಟೆ ಬ್ರಾಂಚ್ ಕಾರ್ಯದರ್ಶ ಅಶ್ರಫ್ ಅಕ್ಕರೆಕೆರೆ ಗುಡ್ಡೆ, ಎಸ್.ಎಂ ಶರೀಫ್, ಹಸನ್ ಹಾಜಿ ಪಟೇಲ್ ಕಂಪೌಂಡ್, ಅಬೂಬಕರ್ ಹಳೆಕೋಟೆ, ಯೂನುಸಾಕ, ಎಸ್ ವೈ ಎಸ್ ಅಕ್ಕರೆಕೆರೆ ಹಳೆಕೋಟೆ ಬ್ರಾಂಚ್ ಉಪಾಧ್ಯಕ್ಷ ಖಾಲಿದ್ ಪಟೇಲ್ ಕಂಪೌಂಡ್, ಎಸ್ಸೆಸ್ಸೆಫ್ ಅಕ್ಕರೆಕೆರೆ ಶಾಖಾಧ್ಯಕ್ಷ ಸಿರಾಜುದ್ದೀನ್ ಹಾಗು ಎಸ್ಸೆಸ್ಸೆಫ್ ಅಕ್ಕರೆಕೆರೆ ಶಾಖಾ ಪ್ರ. ಕಾರ್ಯದರ್ಶಿ ಆಸಿಫ್ ಅಕ್ಕರೆಕೆರೆ ಉಪಸ್ಥಿತರಿದ್ದರು. ಎಸ್ ವೈ ಎಸ್ ಅಕ್ಕರೆಕೆರೆ ಹಳೆಕೋಟೆ ಬ್ರಾಂಚ್ ಪ್ರಧಾನ ಕಾರ್ಯದರ್ಶಿ ನವಾಝ್ ಸಖಾಫಿ ಅಲ್ ಅಮ್ಜದಿ ಉಳ್ಳಾಲ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.