ಮಂಗಳೂರು: ಕಲ್ಕೂರರಿಗೆ 'ಸಾರ್ಥಕ ಸಂಗಮ' ಪುರಸ್ಕಾರ
ಮಂಗಳೂರು, ಫೆ. 21: ಪದ್ಮಭೂಷಣ ಶ್ರೀ ಡಾ. ಬಾಲಗಂಗಾಧರನಾಥ ಸ್ವಾಮೀಜಿ ಅವರ 4ನೆ ಸಂಸ್ಮರಣೋತ್ಸವ ಸಾರ್ಥಕ ಸಮಾಗಮವು ಫೆ.27ರಂದು ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರು ಸರಕಾರಿ ಪ್ರೌಢ ಶಾಲಾ ಆವರಣದಲ್ಲಿ ನಡೆಯಲಿದೆ.
ಸಮಾರಂಭದಲ್ಲಿ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ಅವರಿಗೆ 'ಕರಾವಳಿ ಕನ್ನಡ ಸೇವೆ'ಗಾಗಿ 'ಸಾರ್ಥಕ ಸಂಗಮ' ಪುರಸ್ಕಾರ ನೀಡಿ ಗೌರಸಲಾಗುವುದು.
ಮಾಜಿ ಪ್ರಧಾನಿ ಎಚ್.ಡಿ. ದೇವೆಗೌಡ ಅಧ್ಯಕ್ಷತೆಯಲ್ಲಿ ಜರಗಲಿರುವ ಈ ಸಮಾರಂಭವನ್ನು ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಉದ್ಘಾಟಿಸಲಿದ್ದಾರೆ.
ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಸಿರಿಗೆರೆ ತರಳಬಾಳು ಬೃಹನ್ಮಠದ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಸಹಿತ ಅನೇಕ ಮಠಾಧಿಪತಿಗಳು ಸಾನ್ನಿಧ್ಯ ವಹಿಸಲಿದ್ದಾರೆ. ನಿವೃತ್ತ ಲೋಕಾಯುಕ್ತ ಸಂತೋಷ್ ಹೆಗ್ಡೆ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಚಂದ್ರಶೇಖರ ಕಂಬಾರ ಸಹಿತ ಅನೇಕ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.