ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ
Update: 2017-02-21 23:14 IST
ಮಡಿಕೇರಿ, ಫೆ.21: ಕೊಡಗು ಮೂಲದ ಡಿವೈಎಸ್ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ನಡೆಯಬೇಕಿದ್ದ ವಿಚಾರಣೆ ಮಾರ್ಚ್ 6ಕ್ಕೆ ಮತ್ತೊಮ್ಮೆ ಮುಂದೂಡಲ್ಪಟ್ಟಿದೆ.
ಮಡಿಕೇರಿಯ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶೆ ಅನ್ನಪೂರ್ಣೇಶ್ವರಿ ಪ್ರಕರಣದ ವಿಚಾರಣೆಯನ್ನು ಮುಂದೂಡಿದ್ದಾರೆ.
ದೀರ್ಘ ಕಾಲದ ರಜೆಯಲ್ಲಿದ್ದ ನ್ಯಾಯಾಧೀಶೆ ಅನ್ನಪೂರ್ಣೇಶ್ವರಿ ಕರ್ತವ್ಯಕ್ಕೆ ಮರಳಿದ್ದು, ಅವರ ನ್ಯಾಯಪೀಠದ ಮುಂದೆ ಈ ಪ್ರಕರಣ ವಿಚಾರಣೆಗೆ ಬಂದಿತ್ತು. ನ್ಯಾಯಾಧೀಶರ ರಜೆಯ ಹಿನ್ನೆಲೆಯಲ್ಲಿ ಪ್ರಕರಣ ಪ್ರಿನ್ಸಿಪಲ್ ಸಿವಿಲ್ ಜಡ್ಜ್ ನ್ಯಾಯಾಲಯದ ನ್ಯಾಯಾಧೀಶ ರಮೇಶ್ ಬಾಬು ಅವರ ನ್ಯಾಯಾಲಯಕ್ಕೆ ವರ್ಗಾವಣೆಗೊಂಡಿತ್ತು.
ಆದರೆ, ಕಾರಣಾಂತರಗಳಿಂದ ನ್ಯಾಯಮೂರ್ತಿಗಳು ಒಂದೆರಡು ಬಾರಿ ಮುಂದೂಡಿದರಲ್ಲದೆ, ಫೆ.21ರಂದು ವಿಚಾರಣೆ ನಿಗದಿಯಾಗಿತ್ತು. ಇದೀಗ ಮತ್ತೆ ಮಾರ್ಚ್ 6 ಕ್ಕೆ ವಿಚಾರಣೆ ಮುಂದೂಡಲ್ಪಟ್ಟಿದೆ.