×
Ad

ಶಶಿಕಲಾಗೆ ಚುನಾವಣಾ ಆಯೋಗ ನೋಟಿಸ್

Update: 2017-02-22 13:38 IST

ಚೆನ್ನೈ, ಫೆ.22: ಅಕ್ರಮ ಆಸ್ತಿ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಶಶಿಕಲಾ ನಟರಾಜನ್‌ಗೆ ಚುನಾವಣಾ ಆಯೋಗ ನೋಟಿಸ್ ಜಾರಿ ಮಾಡಿದ್ದು,ಒಂದು ವಾರದಲ್ಲಿ ಉತ್ತರ ನೀಡುವಂತೆ ಸೂಚಿಸಿದೆ.

ಶಶಿಕಲಾ ಎಐಎಡಿಎಂಕೆ ಬೈಲಾದಂತೆ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿಲ್ಲ ಎಂದು ಹೇಳಿರುವ ಪನ್ನೀರ್ ಸೆಲ್ವಂ ಬಣ ಶಶಿಕಲಾ ಆಯ್ಕೆಗೆ ಆಕ್ಷೇಪ ವ್ಯಕ್ತಪಡಿಸಿ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿತ್ತು. ದೂರನ್ನು ಗಂಭೀರವಾಗಿ ಪರಿಗಣಿಸಿರುವ ಚುನಾವಣಾ ಆಯೋಗ ಶಶಿಕಲಾಗೆ ನೋಟಿಸ್ ಜಾರಿ ಮಾಡಿ ಇನ್ನೊಂದು ವಾರದೊಳಗೆ ಉತ್ತರ ನೀಡುವಂತೆ ತಾಕೀತು ಮಾಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News