ರಾಘವೇಶ್ವರ ಶ್ರೀಗೆ ಬ್ಲಾಕ್ ಮೇಲ್ ಕೇಸ್ : ಪ್ರೇಮಲತಾಗೆ ಸಿಐಡಿ ಕ್ಲೀನ್ ಚಿಟ್

Update: 2017-02-22 16:23 GMT

ಬೆಂಗಳೂರು, ಫೆ.22: ರಾಮಕಥಾ ಗಾಯಕಿ ಪ್ರೇಮಲತಾ ದಂಪತಿ ವಿರುದ್ಧದ ಬ್ಲಾಕ್ ಮೇಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರೇಮಲತಾ ದಂಪತಿಗೆ ಸಿಐಡಿ ಕ್ಲೀನ್ ಚಿಟ್ ನೀಡಿದೆ.

ಪ್ರೇಮಲತಾ ದಂಪತಿ ಮೂರು ಕೋಟಿ ಹಣಕ್ಕೆ ಬೇಡಿಕೆಯಿಟ್ಟಿದ್ದರು. ಹಣ ಕೊಡದಿದ್ದರೆ ಅತ್ಯಾಚಾರದ ಕೇಸ್ ದಾಖಲಿಸುವುದಾಗಿ ಬೆದರಿಕೆ ಹಾಕಿದ್ದರು ಎಂದು ರಾಮಚಂದ್ರಾಪುರ ಮಠದಿಂದ ದೂರು ದಾಖಲಿಸಲಾಗಿತ್ತು. ರಾಮಚಂದ್ರಾಪುರ ಮಠದ ಕಾರ್ಯದರ್ಶಿ ಚಂದ್ರಶೇಖರ್ ದೂರು ನೀಡಿದ್ದರು.

ಈ ಹಿನ್ನೆಲೆಯಲ್ಲಿ ಪ್ರೇಮಲತಾ ವಿರುದ್ಧ 2014ರ ಆಗಸ್ಟ್ 26ರಂದು ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದಾದ ಬಳಿಕ ಪ್ರಕರಣವನ್ನು ಸರಕಾರ ಸಿಐಡಿ ತನಿಖೆಗೆ ನೀಡಿತ್ತು. ಪ್ರಕರಣವನ್ನು ಸಂಪೂರ್ಣವಾಗಿ ತನಿಖೆ ಮಾಡಿದ ಸಿಐಡಿ ಅಧಿಕಾರಿಗಳು ಇಂದು ಬಿ-ರಿಪೋರ್ಟ್ ಸಲ್ಲಿಸಿದ್ದಾರೆ.

ಬ್ಲಾಕ್ ಮೇಲ್ ಆರೋಪ ಸಾಬೀತುಪಡಿಸಲು ಸಾಕ್ಷಾಧಾರ ಇಲ್ಲ ಎಂದು ಸಿಐಡಿ ಅಧಿಕಾರಿಗಳು ಹೊನ್ನಾವರ ನ್ಯಾಯಾಲಯಕ್ಕೆ ಬಿ-ರಿಪೋರ್ಟ್ ಸಲ್ಲಿಸಿದ್ದಾರೆ. ಹೀಗಾಗಿ ಪ್ರೇಮಲತಾ ದಂಪತಿಗೆ ಕ್ಲೀನ್ ಚಿಟ್ ಸಿಕ್ಕಂತಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News