ಮಂಗಳೂರು ಬಂದ್ ಕರೆಗೆ ಕೋಸೌವೇ ಖಂಡನೆ

Update: 2017-02-22 18:48 GMT

ಮಂಗಳೂರು, ೆ.22: ನಗರದಲ್ಲಿ ೆ.25ರಂದು ನಡೆಯಲಿರುವ ಸೌಹಾರ್ದ ರ್ಯಾಲಿಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆಗಮಿಸುವುದನ್ನು ವಿರೋಸಿ ಸಂಘ ಪರಿವಾರದ ಹಲವು ಸಂಘಟನೆ ಗಳು ಮಂಗಳೂರು ಬಂದ್‌ಗೆ ಕರೆ ನೀಡಿದ್ದನ್ನು ಕರ್ನಾಟಕ ಕೋಮು ಸೌಹಾರ್ದ ವೇದಿಕೆಯ ದ.ಕ. ಜಿಲ್ಲಾ ಘಟಕವು ತೀವ್ರವಾಗಿ ಖಂಡಿಸಿದೆ.

ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ ರಾಜ್ಯವೊಂದರ ಮುಖ್ಯಮಂತ್ರಿ ಮಂಗಳೂರಿಗೆ ಆಗಮಿಸುವುದನ್ನು ವಿರೋಸಿ ಬಂದ್‌ಗೆ ಕರೆಕೊಟ್ಟ ಸಂಘಪರಿವಾರದ ನಡೆ, ಅದರ ಅಸಹಿಷ್ಣುತೆ ಮತ್ತು ಹತಾಶೆಯನ್ನು ಬಿಂಬಿಸುತ್ತದೆ. ಮಂಗಳೂರು ಕೇವಲ ಸಂಘಪರಿವಾರದವರಿಗೆ ಸೇರಿದ್ದಲ್ಲ. ಇಲ್ಲಿಗೆ ಯಾರಾದರೂ ಬರದಂತೆ ತಡೆಯುವ ಹಕ್ಕು ಯಾರಿಗೂ ಇಲ್ಲ. ರಾಜ್ಯ ಸರಕಾರ ಮತ್ತು ಗೃಹ ಇಲಾಖೆ ಇದನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ವೇದಿಕೆ ಆಗ್ರಹಿಸಿದೆ.

ಸೌಹಾರ್ದ ರ್ಯಾಲಿಗೆ ತಡೆಯೊಡ್ಡುವ ಬೆದರಿಕೆ ಹಾಕಿದ ಸಂಘಪರಿವಾರದ ಗೂಂಡಾಗಳನ್ನು ಮುಂಜಾಗರೂಕತಾ ಕ್ರಮವಾಗಿ ವಶಕ್ಕೆ ತೆಗೆದುಕೊಳ್ಳಬೇಕು ಮತ್ತು ಕಾನೂನು ಸುವವಸ್ಥೆ ಕಾಪಾಡಿ ಜಿಲ್ಲೆಯ ಶಾಂತಿ ಸೌಹಾರ್ದ ನೆಲೆಸುವಂತೆ ಕ್ರಮ ಕೈಗೊಳ್ಳಬೇಕು ಎಂದು ವೇದಿಕೆಯ ಜಿಲ್ಲಾಧ್ಯಕ್ಷ ಸುರೇಶ್ ಭಟ್ ಬಾಕ್ರಬೈಲ್ ಒತ್ತಾಯಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News