ದೇವನಹಳ್ಳಿ ಶಾಸಕ ಪಿಳ್ಳ ಮುನಿಶಾಮಪ್ಪ ರಾಜೀನಾಮೆ

Update: 2017-02-23 08:18 GMT

ಬೆಂಗಳೂರು, ಫೆ.23: ದೇವನಹಳ್ಳಿಯ ಜೆಡಿಎಸ್ ಶಾಸಕ ಪಿಳ್ಳ ಮುನಿಶಾಮಪ್ಪತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಪಿಳ್ಳ ಮುನಿಶಾಮಪ್ಪ ತನ್ನ ರಾಜಿನಾಮೆ ಪತ್ರವನ್ನ ಸ್ಪೀಕರ್ ಕೋಳಿವಾಡ ಅವರಿಗೆ ಸಲ್ಲಿಸಿದ್ದು, ಕೂಡಲೇ ಅಂಗೀಕರಿಸುವಂತೆ ಮನವಿ ಮಾಡಿದ್ದಾರೆ. ವೈಯಕ್ತಿಕ ಕಾರಣಕ್ಕೆ ಅವರು ರಾಜೀನಾಮೆ ನೀಡಿದ್ದಾರೆ ಎಂದು ಹೇಳಲಾಗುತ್ತಿದ್ದರೂ, ನಿಸರ್ಗ ನಾರಾಯಣಸ್ವಾಮಿ ಜೆಡಿಎಸ್‌ಗೆ ಸೇರ್ಪಡೆಗೊಂಡ ಹಿನ್ನೆಲೆಯಲ್ಲಿ ಪಿಳ್ಳ ಮುನಿಶಾಮಪ್ಪ ರಾಜಿನಾಮೆ ನೀಡಿದ್ದಾರೆ ಎನ್ನಲಾಗಿದೆ.
]ರಾಜೀನಾಮೆ ಕುರಿತಂತೆ ಪ್ರತಿಕ್ರಿಯಿಸಿರುವ ಸ್ಪೀಕರ್ ಕೋಳಿವಾಡ, ಮುನಿಶಾಮಪ್ಪ ನನ್ನ ಕಚೇರಿಗೆ ಬಂದು ರಾಜೀನಾಮೆ ನೀಡಿದ್ದಾರೆ. ನಿಯಮಾವಳಿಗಳ ಪ್ರಕಾರ ಅದನ್ನು ಪರಿಶೀಲಿಸಲಾಗುತ್ತಿದೆ ಎಂದಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News