'ವಾರ್ತಾಭಾರತಿ' ನೂತನ ಕಚೇರಿ ಸಂಕೀರ್ಣ ‘ಮಾಧ್ಯಮ ಕೇಂದ್ರ’ ನಿರ್ಮಾಣಕ್ಕೆ ಫೆ.25ರಂದು ಕೇರಳ ಸಿಎಂ ಪಿಣರಾಯಿ ಚಾಲನೆ

Update: 2017-02-23 13:58 GMT

ಮಂಗಳೂರು, ಫೆ.23: ‘ವಾರ್ತಾಭಾರತಿ’ ದೈನಿಕದ ನೂತನ ಕಚೇರಿ ಸಂಕೀರ್ಣ ‘ಮಾಧ್ಯಮ ಕೇಂದ್ರ’ ನಿರ್ಮಾಣಕ್ಕೆ ಚಾಲನೆ ಕಾರ್ಯಕ್ರಮವು ಫೆ.25ರಂದು ಅತ್ತಾವರ ರಸ್ತೆಯ ಮಸ್ಜಿದುನ್ನೂರ್ ಬಳಿ ಐಎಂಎ ಸಭಾಂಗಣದಲ್ಲಿ ಜರಗಲಿದೆ.

ಅಂದು ಪೂರ್ವಾಹ್ನ 11 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ‘ಮಾಧ್ಯಮ ಕೇಂದ್ರ’ ನಿರ್ಮಾಣಕ್ಕೆ ಚಾಲನೆ ನೀಡುವರು. ನೂತನ ಕಚೇರಿ ಸಂಕೀರ್ಣವುಕಂಕನಾಡಿ ಮಾರುಕಟ್ಟೆಯ ಹಿಂಭಾಗದಲ್ಲಿ ನಿರ್ಮಾಣಗೊಳ್ಳಲಿದೆ.

ಮುಖ್ಯ ಅತಿಥಿಗಳಾಗಿ ಅರಣ್ಯ ಸಚಿವ ಬಿ.ರಮಾನಾಥ ರೈ, ಆಹಾರ, ನಾಗರಿಕ ಸರಬರಾಜು ಸಚಿವ ಯು.ಟಿ.ಖಾದರ್, ಮಾಜಿ ಸಚಿವ, ಶಾಸಕ ಕೆ.ಅಭಯಚಂದ್ರ ಜೈನ್, ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜ, ಶಾಸಕರಾದ ಜೆ.ಆರ್.ಲೋಬೊ, ಬಿ.ಎ.ಮೊಯ್ದಿನ್ ಬಾವ, ಮನಪಾ ಮೇಯರ್ ಹರಿನಾಥ್, ಶಿರೂರು ಗ್ರೀನ್‌ವ್ಯಾಲಿ ನ್ಯಾಶನಲ್ ಸ್ಕೂಲ್ ಅಧ್ಯಕ್ಷ ಸೈಯದ್ ಅಬ್ದುಲ್ ಖಾದರ್ ಬಾಶು, ಅಲ್ ಮುಝೈನ್‌ನ ಆಡಳಿತ ನಿರ್ದೇಶಕ ಝಕರಿಯಾ ಜೋಕಟ್ಟೆ, ಇನ್‌ಲ್ಯಾಂಡ್ ಬಿಲ್ಡರ್ಸ್‌ನ ಅಧ್ಯಕ್ಷ ಮತ್ತು ಆಡಳಿತ ನಿರ್ದೇಶಕ ಸಿರಾಜ್ ಅಹ್ಮದ್, ಗೋವಾದ ಕ್ವಾಲಿಟಿ ಎಕ್ಸ್‌ಪೋರ್ಟ್ಸ್ ಇದರ ಆಡಳಿತ ನಿರ್ದೇಶಕ ಹಾಗೂ ಪಾಲುದಾರ ವೌಲಾನ ಇಬ್ರಾಹೀಂ ಗೋವಾ, ಆಝಾದ್ ಹಾರ್ಡ್‌ವೇರ್‌ನ ಆಡಳಿತ ನಿರ್ದೇಶಕ ಮನ್ಸೂರ್ ಅಹ್ಮದ್, ಮಾಧ್ಯಮ ಕಮ್ಯುನಿಕೇಷನ್ಸ್‌ನ ನಿರ್ದೇಶಕ ಎಚ್.ಎಂ.ಅಫ್ರೋಝ್ ಅಸ್ಸಾದಿ, ಮನಪಾ ಆಯುಕ್ತ ಮುಹಮ್ಮದ್ ನಝೀರ್, ಮನಪಾ ಸದಸ್ಯ ನವೀನ್ ಡಿಸೋಜ, ಮತ್ತಿತರರು ಭಾಗವಹಿಸುವರು.

 'ವಾರ್ತಾಭಾರತಿ'ಯ ಪ್ರಧಾನ ಸಂಪಾದಕ ಅಬ್ದುಸ್ಸಲಾಂ ಪುತ್ತಿಗೆ ಸಮಾರಂಭದ ಅಧ್ಯಕ್ಷತೆ ವಹಿಸುವರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News