ಪುತ್ತೂರು: ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ 2 ಲಾರಿ ವಶಕ್ಕೆ
Update: 2017-02-23 20:35 IST
ಪುತ್ತೂರು, ಫೆ.23: ಅಕ್ರಮವಾಗಿ ಮರಳು ಸಾಗಾಟ ನಡೆಸುತ್ತಿದ್ದ ಪ್ರಕರಣವನ್ನು ಪತ್ತೆ ಹಚ್ಚಿದ ಪುತ್ತೂರು ನಗರ ಠಾಣಾ ಪೊಲೀಸರು ಬುಧವಾರ ತಡರಾತ್ರಿ 2 ಲಾರಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಮಂಗಳೂರಿನಿಂದ ಬೆಂಗಳೂರಿಗೆ ಅಕ್ರಮವಾಗಿ ಮರಳು ಸಾಗಾಣೆ ಮಾಡುತ್ತಿದ್ದ ಎರಡು ಲಾರಿಗಳನ್ನು ಪುತ್ತೂರು ನಗರ ಠಾಣಾ ವ್ಯಾಪ್ತಿಯ ಕೆದಿಲ ಗ್ರಾಮದ ಗಡಿಯಾರ ಎಂಬಲ್ಲಿ ವಶಕ್ಕೆ ಪಡೆದುಕೊಂಡರು.
ಕಾರ್ಯಾಚರಣೆ ವೇಳೆಯಲ್ಲಿ ಲಾರಿ ಚಾಲಕರು ಪರಾರಿಯಾಗಿದ್ದಾರೆ. ಲಾರಿಗಳೆರಡರಲ್ಲಿ ಒಟ್ಟು ರೂ. 70 ಸಾವಿರ ಮೌಲ್ಯದ ಮರಳು ಸಾಗಾಟ ಮಾಡಲಾಗುತ್ತಿತ್ತು.
ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.