ಕರಾವಳಿ ಸೌಹಾರ್ದ ರ‍್ಯಾಲಿ: ಶಾಂತಿ ಸುವ್ಯವಸ್ಥೆತೆ ಕಾಪಾಡಲು 23 ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿ ನೇಮಕ
Update: 2017-02-23 23:23 IST
ಮಂಗಳೂರು, ಫೆ. 23: ಸಿಪಿಎಂ ವತಿಯಿಂದ ನಗರದ ನೆಹರೂ ಮೈದಾನದಲ್ಲಿ ಫೆ. 25ರಂದು ನಡೆಯುವ ಕರಾವಳಿ ಸೌಹಾರ್ದ ರ್ಯಾಲಿ ಮತ್ತು ಸಮಾವೇಶಕ್ಕೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆಗಮಿಸುತ್ತಿರುವುದರಿಂದ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ತೆ ಕಾಪಾಡುವ ನಿಟ್ಟಿನಲ್ಲಿ ಫೆ. 24ರಿಂದ 25ರವರೆಗೆ 23 ಮಂದಿ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿಗಳನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.