×
Ad

ಮುಡಿಪು: ವಿವಿ ಮಟ್ಟದ ಅಂತರ್ ಕಾಲೇಜು ಪುರುಷರ ಹಗ್ಗಜಗ್ಗಾಟ ಪಂದ್ಯಾಟ; ಕಟಪಾಡಿ ಕೆವಿಎಸ್‌ಎಂ ಪ್ರಥಮ

Update: 2017-02-23 23:52 IST

ಕೊಣಾಜೆ, ಫೆ.23:  ಮುಡಿಪುವಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ನಡೆದ ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಅಂತರ ಕಾಲೇಜು ಪುರುಷರ ಹಗ್ಗಜಗ್ಗಾಟ ಪಂದ್ಯಾಟದಲ್ಲಿ ಕಟಪಾಡಿಯ ಕೃಷ್ಣಬಾಯಿ ವಾಸುದೇವ ಶೆಣೈ ಮೆಮೋರಿಯಲ್ ಕಾಲೇಜು(ಕೆವಿಎಸ್‌ಎಂ) ಪ್ರಥಮ ಪ್ರಶಸ್ತಿಯನ್ನು ಪಡೆದುಕೊಂಡು, ಮುಡಿಪುವಿನ ಸರಕಾರಿ ಪ್ರಥಮ ದರ್ಜೆ ಕಾಲೇಜು ತಂಡವು ದ್ವಿತೀಯ ಪ್ರಶಸ್ತಿಯನ್ನು ಪಡೆದುಕೊಂಡಿತು.

 ಶ್ರೀ ವೆಂಕಟರಮಣ ಕಾಲೇಜು ಬಂಟ್ವಾಳ ಹಾಗೂ ಕಟೀಲು ಪ್ರಥಮ ದರ್ಜೆ ಕಾಲೇಜು ಕ್ರಮವಾಗಿ ತೃತೀಯ ಹಾಗೂ ಚತುರ್ಥ ಸ್ಥಾನವನ್ನು ಪಡೆದುಕೊಂಡಿತು.

ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ವಿಜೇತ ತಂಡಗಳಿಗೆ ಪ್ರಶಸ್ತಿಯನ್ನು ವಿತರಿಸಿ ಮಾತನಾಡಿದ ಉದ್ಯಮಿ ರಮೇಶ್ ಶೇಣವ ಅವರು, ಇಂದು ಕ್ರೀಡಾ ಕ್ಷೇತ್ರಕ್ಕೆ ಉತ್ತಮ ಪ್ರೋತ್ಸಾಹಗಳು ದೊರಕುತ್ತಿದ್ದು ವಿದ್ಯಾರ್ಥಿಗಳು ಶೈಕ್ಷಣಿಕ ಚಟುವಟಿಕೆಯೊಂದಿಗೆ ಇಂತಹ ಅವಕಾಶಗಳನ್ನು ಬಳಸಿಕೊಂಡು ಮುನ್ನಡೆಯಬೇಕು ಎಂದು ಹೇಳಿದರು.

ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ.ಗಿರಿಧರ್ ರಾವ್ ಅವರು ವಹಿಸಿದ್ದರು.

ಕಾರ್ಯಕ್ರಮದಲ್ಲಿ ನಿವೃತ್ತ ದೈಹಿಕ ಶಿಕ್ಷಕ ಶೀನ ಶೆಟ್ಟಿ, ಇರಾ ಗ್ರಾಮ ಪಂಚಾಯಿತಿ ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ, ಉಪನ್ಯಾಸಕರಾದ ಶ್ರೀಧರ ಮಣಿಯಾಣಿ, ನಂದಕಿಶೋರ್ ಮುಂತಾದವರು ಉಪಸ್ಥಿತರಿದ್ದರು. ದೈಹಿಕ ಶಿಕ್ಷಣ ಶಿಕ್ಷಕಿ ಶುಭಾ ಕೆ.ಎಚ್ ಅವರು ಸ್ವಾಗತಿಸಿದರು.

ಬೆಳಿಗ್ಗೆ ನಡೆದ ಅಂತರ ಕಾಲೇಜು ಹಗ್ಗಜಗ್ಗಾಟ ಸ್ಪರ್ಧೆಯ ಉದ್ಘಾಟನಾ ಸಮಾರಂಭದಲ್ಲಿ ಸಚಿವ ಯು.ಟಿ.ಖಾದರ್, ಜಿಲ್ಲಾ ಪಂಚಾಯಿತಿ ಸದಸ್ಯೆ ಮಮತಾ ಎಸ್.ಗಟ್ಟಿ, ಕಾಲೇಜು ಅಭಿವೃದ್ದಿ ಸಮಿತಿ ಕಾರ್ಯಾಧ್ಯಕ್ಷ ಪ್ರಶಾಂತ್ ಕಾಜವ, ಅಬ್ದುಲ್ ಜಲೀಲ್ ಮೋಂಟುಗೋಳಿ, ವಿಜೇಶ್ ಮೊದಲಾದವರು ಉಪಸ್ಥಿತರಿದ್ದರು.

ಸ್ಪರ್ಧೆಯ ತೀರ್ಪುಗಾರರಾಗಿ ಭಗವಾನ್ ದಾಸ್, ನಾಗಪ್ಪ, ರೋಹನ್ ತೊಕ್ಕೊಟ್ಟು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News