ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಸೂಕ್ತ ಕ್ರಮ: ಬಿ.ರಮಾನಾಥ ರೈ

Update: 2017-02-24 08:46 GMT

ಮಂಗಳೂರು.ಫೆ.24:ಕೇರಳ ರಾಜ್ಯದ ಮುಖ್ಯ ಮಂತ್ರಿ ಫೆ.25ರಂದು ಜಿಲ್ಲೆಗೆ ಆಗಮಿಸುತ್ತಿರುವ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಸೂಕ್ತ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಸಂವಿಧಾನ ಬಾಹಿರ ಕೃತ್ಯ ನಡೆಸಲು ಅವಕಾಶ ನೀಡುವುದಿಲ್ಲ.ಜಿಲ್ಲೆಯ ಜನರು ಈ ರೀತಿಯ ಕಾನೂನು ಬಾಹಿರವಾಗಿ ಕೃತ್ಯದಲ್ಲಿ ಭಾಗಿಯಾಗಬಾರದಾಗಿ ಜಿಲ್ಲೆಯ ಜನತೆಯಲ್ಲಿ ಮನವಿ ಮಾಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ಕೇರಳ ರಾಜ್ಯದ ಮುಖ್ಯ ಮಂತ್ರಿ ಜಿಲ್ಲೆಗೆ ಆಗಮಿಸುತ್ತಿರುವ ಸಂದರ್ಭದಲ್ಲಿ ಅವರನ್ನು ತಡೆಯುವುದು,ಬಂದ್‌ಗೆ ಕರೆ ನೀಡುವುದು ಕಾನೂನು ಬಾಹಿರ ಪ್ರಜಾಪ್ರಭುತ್ವಕ್ಕೆ ವಿರೋಧವಾದ ನಿಲುವು ಇಂತಹ ವ್ಯಕ್ತಿಗಳ ಬಗ್ಗೆ ಸೂಕ್ತ ಕ್ರಮವನ್ನು ಅಧಿಕಾರಿಗಳು ಕೈ ಗೊಳ್ಳಲಿದ್ದಾರೆ.ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ಆಗದಂತೆ ಜಿಲ್ಲೆಯ ಜನತೆ ಸಹಕಾರ ನೀಡಬೇಕು ಕಿಡಿಗೇಡಿ ಕೃತ್ಯದಲ್ಲಿ ಜಿಲ್ಲೆಯ ಶಾಂತಿಪ್ರೀಯ ಜನರು ಭಾಗವಹಿಸದಂತೆ ರಮಾನಾಥ ರೈ ಕರೆ ನೀಡಿದರು.

ಬುದ್ದಿವಂತರ ಜಿಲ್ಲೆ ಎಂದು ಕರೆಸಿಕೊಂಡಿರುವ ದ.ಕ ಜಿಲ್ಲೆಯ ಜನರು ಇನ್ನೊಂದು ರಾಜ್ಯದ ಮುಖ್ಯಮಂತ್ರಿ ಜಿಲ್ಲೆಗೆ ಆಗಮಿಸುವ ಸಂದರ್ಭದಲ್ಲಿ ಇತರರನ್ನು ಗೌರವಿಸುವ ಉನ್ನತ ಸಂಸ್ಕೃತಿಯನ್ನು ತೋರಬೇಕು.ವಿವೇಚನೆಯಿಂದ ವರ್ತಿಸಬೇಕು.ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲೆ ನಂಬಿಕೆ ಇರುವ ನಾವು ಸಂವಿಧಾನ ಬಾಹಿರ ಕೃತ್ಯದಲ್ಲಿ ಭಾಗವಹಿಸಿ ಘರ್ಷಣೆಗೆ ಅವಕಾಶ ಮಾಡಿ ಕೊಡಬಾರದು ಅದು ಜಿಲ್ಲೆಯ ಸಂಸ್ಕೃತಿಯೂ ಅಲ್ಲ .ನಾವು ಯಾವೂದೇ ಜಾತಿ,ಧರ್ಮದ ಕೋಮುವಾದವನ್ನು ಬೆಂಬಲಿಸುವುದಿಲ್ಲ ಎಂದು ರಮಾನಾಥ ರೈ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಭಾರ ಅಧ್ಯಕ್ಷ ಇಬ್ರಾಹೀಂ ಕೋಡಿಜಾಲ್,ಮೂಡಾ ಅಧ್ಯಕ್ಷ ಸುರೇಶ್ ಬಲ್ಲಾಳ್,ಮೇಯರ್ ಹರಿನಾಥ್,ಮಂಗಳೂರು ತಾಲೂಕು ಪಂಚಾಯತ್ ಅಧ್ಯಕ್ಷ ಮುಹಮ್ಮದ್ ಮೋನು,ಮನಪಾ ಮುಖ್ಯ ಸಚೇತಕ ಶಶಿಧರ ಹೆಗ್ಡೆ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News