ಫೆ.25ರಂದು ಪ್ರಥಮ ಪಿಯುಸಿ ಪರೀಕ್ಷೆಗೆ ಹಾಜರಾಗಲು ಸೂಚನೆ
Update: 2017-02-24 19:44 IST
ಮಂಗಳೂರು, ಫೆ.24: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಫೆ.25ರಂದು ಮಂಗಳೂರಿಗೆ ಆಗಮಿಸುವ ಹಿನ್ನೆಲೆಯಲ್ಲಿ ಕೆಲವು ಸಂಘಟನೆಗಳು ದ.ಕ.ಜಿಲ್ಲಾ ಬಂದ್‌ಗೆ ಕರೆ ನೀಡಿರುವುದರಿಂದ ಬಸ್ ಸಂಚಾರದಲ್ಲಿ ವ್ಯತ್ಯಯವಾಗಲಿದೆ ಎಂದು ಹೇಳಲಾಗುತ್ತಿದೆ.
ಜಿಲ್ಲೆಯ 124 ಕಾಲೇಜುಗಳಲ್ಲಿ 17,135 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ವಿದ್ಯಾರ್ಥಿಗಳು ಪರೀಕ್ಷೆಯನ್ನು ಮುಕ್ತವಾಗಿ ಬರೆಯುವ ದೃಷ್ಟಿಯಿಂದ ಬಂದೋಬಸ್ತ್ ಹಾಗು ಬಸ್ ಸಂಚಾರ ವ್ಯವಸ್ಥೆಯನ್ನು ಮಾಡಲಾಗಿದೆ.
ಹಾಗಾಗಿ ವಿದ್ಯಾರ್ಥಿಗಳು ನಿರ್ಭಯವಾಗಿ ಪರೀಕ್ಷೆಗೆ ಹಾಜರಾಗಬೇಕು ಎಂದು ಅಪರ ಜಿಲ್ಲಾಧಿಕಾರಿ ಕುಮಾರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.