28ರಂದು ಪಿಲಿಕುಳದಲ್ಲಿ ‘ರಾಷ್ಟ್ರೀಯ ವಿಜ್ಞಾನ ದಿನಾಚರಣೆ’

Update: 2017-02-24 18:36 GMT

ಮಂಗಳೂರು, ೆ.24: ನೊಬೆಲ್ ಪ್ರಶಸ್ತಿ ವಿಜೇತ ಸರ್ ಸಿ.ವಿ. ರಾಮನ್‌ರವರು ‘ರಾಮನ್ ಪರಿಣಾಮ’ ಕಂಡು ಹಿಡಿದ ನೆನಪಿಗಾಗಿ ೆ.28ರಂದು ರಾಷ್ಟ್ರೀಯ ವಿಜ್ಞಾನ ದಿನವನ್ನು ‘ವಿಜ್ಞಾನ ಮತ್ತು ತಂತ್ರಜ್ಞಾನ-ದಿವ್ಯಾಂಗರಿಗೆ’ ಎಂಬ ವಿಷಯದಲ್ಲಿ ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ಸೊಸೈಟಿ ವತಿಯಿಂದ ಆಚರಿಸಲು ನಿರ್ಧರಿಸಲಾಗಿದೆ. ಸುದ್ದಿಗೋಷ್ಠಿಯಲ್ಲಿಂದು ಈ ವಿಷಯ ತಿಳಿಸಿದ ಡಾ.ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದ ಪ್ರಭಾರ ಕಾರ್ಯನಿರ್ವಾಹಕ ನಿರ್ದೇಶಕ ವಿ.ಪ್ರಸನ್ನ, ಅಂದು ಬೆಳಗ್ಗೆ 9ರಿಂದ ಸಂಜೆಯವರೆಗೆ ವೈದ್ಯಕೀಯ, ಇಂಜಿನಿಯರಿಂಗ್, ಪ್ರಥಮ ದರ್ಜೆ ಕಾಲೇಜುಗಳು ಹಾಗೂ ಹೈಸ್ಕೂಲ್‌ಗಳನ್ನೊಳಗೊಂಡ ವಿಕಲಚೇತನರಿಗೆ ಜೀವನ ಶೈಲಿ ಉತ್ತಮಗೊಳಿಸುವ ನೂತನ ಆವಿಷ್ಕಾರಗಳಿಗೆ ಸಂಬಂಸಿದ ವಿಜ್ಞಾನ ವಸ್ತು ಪ್ರದರ್ಶನ, ಇತರ ಆವಿಷ್ಕಾರಗಳು, ಏರೋ ಮತ್ತು ಡ್ರೋನ್ ಶೋ, ಡಿಜಿಟಲ್ ಮೊಬೈಲ್ ಪ್ಲಾನೆಟೇರಿಯಂ ಶೋ ಹಾಗೂ ಇತರ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು.

ಜಿಲ್ಲೆಯ ಎಲ್ಲ ವಿಕಲಚೇತನ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರಿಗೆ ಪಿಲಿಕುಳದ ವಿಜ್ಞಾನ ಕೇಂದ್ರ, ಜೈವಿಕ ಉದ್ಯಾನವನ ಮತ್ತು ಕರಕುಶಲ ಗ್ರಾಮಗಳಿಗೆ ಉಚಿತ ಪ್ರವೇಶ ನೀಡಲಾಗುವುದು. ಅದೇ ಶಾಲೆಗಳಿಂದ ಆಯ್ಕೆ ಮಾಡಿ ಕಳುಹಿಸಿದ ವಿದ್ಯಾರ್ಥಿಗಳಿಗೆ ಟೈಪಿಂಗ್ ಮತ್ತು ಪೈಂಟಿಂಗ್ ಸ್ಪರ್ಧೆಗಳನ್ನು ನಡೆಸಲಾಗುವುದು. ಮಕ್ಕಳಿಗೆ ಉಚಿತ ಉಪಾಹಾರ ಮತ್ತು ಊಟದ ವ್ಯವಸ್ಥೆ ಮಾಡಲಾಗುವುದು ಎಂದರು. ಬೆಂಗಳೂರಿನ ವಿಶ್ವೇಶ್ವರಯ್ಯ ಮ್ಯೂಸಿಯಂನ ತಜ್ಞರಿಂದ ಮನರಂಜನೆಗಾಗಿ ವಿಜ್ಞಾನ ಪ್ರಾತ್ಯಕ್ಷಿಕೆ, ಡಿಜಿಟಲ್ ಮೊಬೈಲ್ ಪ್ಲಾನೆಟೋರಿಯಂ ಪ್ರದರ್ಶನವನ್ನು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸಹಯೋಗದಲ್ಲಿ ಆಯೋಜಿಸಲಾಗಿದ್ದು, ಹೈಸ್ಕೂಲ್ ಹಾಗೂ ಕಾಲೇಜು ಮಟ್ಟ ಹಾಗೂ ಸಾರ್ವಜನಿಕ ವಿಭಾಗದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯೂ ಈ ಸಂದರ್ಭದಲ್ಲಿ ನಡೆಯಲಿದೆ.

ಬೆಳಗ್ಗೆ 10ಕ್ಕೆ ಸಮಾರಂಭವು ಶಾಸಕ ಅಭಯಚಂದ್ರ ಜೈನ್ ಅಧ್ಯಕ್ಷತೆಯಲ್ಲಿ ಪಿಲಿಕುಳದ ರಂಗಮಂದಿರದಲ್ಲಿ ಆರಂಭಗೊಳ್ಳಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಉದ್ಘಾಟನೆ ನೆರವೇರಿಸಲಿದ್ದು, ಮೇಯರ್ ಹರಿನಾಥ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದರು. ಸುದ್ದಿಗೋಷ್ಠಿಯಲ್ಲಿ ಪಿಲಿಕುಳ ವಿಜ್ಞಾನ ಕೇಂದ್ರದ ನಿರ್ದೇಶಕ ಡಾ.ಕೆ.ವಿ. ರಾವ್, ಸಂಸ್ಕೃತಿ ಗ್ರಾಮದ ಮುಖ್ಯಸ್ಥ ನಿತಿನ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News