×
Ad

ಕೇರಳ ಸಿಎಂ ಪಿಣರಾಯಿ ವಿಜಯನ್ ಮಂಗಳೂರಿಗೆ ಆಗಮನ

Update: 2017-02-25 11:06 IST

ಮಂಗಳೂರು, ಫೆ.25: ನಗರದಲ್ಲಿ ಇಂದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿರುವ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳೂರು ಕೇಂದ್ರ ರೈಲು ನಿಲ್ದಾಣಕ್ಕೆ ಬೆಳಗ್ಗೆ 10:50ರ ವೇಳೆಗೆ ಬಂದಿಳಿದರು.

ರೈಲ್ವೇ ನಿಲ್ದಾಣದಲ್ಲಿ ಸಿಪಿಎಂ ಕಾರ್ಯಕರ್ತರು ಭಾರೀ ಸಂಖ್ಯೆಯಲ್ಲಿ ಅವರನ್ನು ಸ್ವಾಗತಿಸಿದರು. ಬಿಗಿ ಪೊಲೀಸ್ ಸಿಬ್ಬಂದಿ ಬಂದೋಬಸ್ತ್‌ನ ನಡುವೆ ಡ್ರೋನ್ ಕಣ್ಗಾವಲು ಕೂಡಾ ಒದಗಿಸುವ ಮೂಲಕ ಕೇರಳದ ಮುಖ್ಯಮಂತ್ರಿಗೆ ಮಂಗಳೂರು ಭೇಟಿಗೆ ವಿಶೇಷ ಕಾಳಜಿ ವಹಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News