×
Ad

ಧರ್ಮಸ್ಥಳದಲ್ಲಿ ಬಂದ್‌ಗೆ ನೀರಸ ಪ್ರತಿಕ್ರಿಯೆ

Update: 2017-02-25 12:18 IST

ಬೆಳ್ತಂಗಡಿ, ಫೆ.25: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳೂರು ಭೇಟಿಯನ್ನು ವಿರೋಧಿಸಿ ಸಂಘ ಪರಿವಾರ ಕರೆ ನೀಡಿರುವ ಹರತಾಳಕ್ಕೆ ಧರ್ಮಸ್ಥಳದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇಲ್ಲಿ ಬಂದ್‌ಗೆ ಯಾವುದೇ ಬೆಂಬಲ ವ್ಯಕ್ತವಾಗಿಲ್ಲ. ಅಂಗಡಿಮುಂಗಟ್ಟುಗಳು ಎಂದಿನಂತೆ ತೆರೆದಿದ್ದವು. ವಾಹನ ಸಂಚಾರವು ಎಂದಿನಂತಿತ್ತು.

ತಾಲೂಕಿನಾದ್ಯಂತ ಬಂದ್ಗೆ ಭಾಗಶಃ ಬೆಂಬಲ ವ್ಯಕ್ತವಾಗಿದೆ. ಖಾಸಗಿ ಬಸ್‌ಗಳು ರಸ್ತೆಗೆ ಇಳಿಯದಿದ್ದರೂ ಸರಕಾರಿ ಬಸ್‌ಗಳು ಎಂದಿನಂತೆ ಓಡಾಟ ನಡೆಸಿದವು. ಕೆಲವೆಡೆಗಳಲ್ಲಿ ಅಂಗಡಿಗಳು ಬಾಗಿಲು ಮುಚ್ಚಿದ್ದವು. ಆದರೆ ಆಟೋ ರಿಕ್ಷಾಗಳು ಹಾಗೂ ಖಾಸಗಿ ವಾಹನಗಳು ಸಂಚರಿಸುತ್ತಿದ್ದವು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News