ಬಂಟ್ವಾಳ: ಫೆ.28ಕ್ಕೆ ಮದರ್ ತೆರೆಸಾ ಸಂತ ಪದವಿ ಪ್ರಾಪ್ತಿಯ ಸಂಭ್ರಮಾಚರಣೆ ಕಾರ್ಯಕ್ರಮ

Update: 2017-02-25 17:55 GMT

ಬಂಟ್ವಾಳ, ಫೆ. 25: ದೇವರಾಜ ಅರಸು ಪ್ರಶಸ್ತಿ ಪುರಸ್ಕೃತ ಬಿ.ಸುಬ್ಬಯ್ಯ ಶೆಟ್ಟಿ, ಬಿ.ಎ.ಮೊಯ್ದಿನ್ ಮತ್ತು ದಿನೇಶ್ ಅಮೀನ್ ಮಟ್ಟುರವರಿಗೆ ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಅಭಿನಂದನಾ ಸಮಾರಂಭ ಹಾಗೂ ಮದರ್ ತೆರೆಸಾ ಸಂತ ಪದವಿ ಪ್ರಾಪ್ತಿಯ ಸಂಭ್ರಮಾಚರಣೆ ಫೆ. 28ರಂದು ಅಪರಾಹ್ನ 3 ಗಂಟೆಗೆ ಬಂಟ್ವಾಳ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ ಎಂದು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಬ್ಬಾಸ್ ಅಲಿ ತಿಳಿಸಿದರು.

ಶನಿವಾರ ಸಂಜೆ ಬಿ.ಸಿ.ರೋಡಿನ ಪ್ರೆಸ್‌ಕ್ಲಬ್‌ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೇಂದ್ರದ ಮಾಜಿ ಸಚಿವ ಹಾಗೂ ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡೀಸ್ ವಹಿಸುವರು, ವಿಶೇಷ ಆಹ್ವಾನಿತರಾಗಿ ಬಂದರು ಸಚಿವ ಪ್ರಮೋದ್ ಮಧ್ವರಾಜ್, ಕೆಪಿಸಿಸಿ ಉಪಾಧ್ಯಕ್ಷ ಡಾ. ಬಿ.ಎಲ್.ಶಂಕರ್ ಭಾಗವಹಿಸುವರು.

ಸಾಹಿತಿ, ಸಂಶೋಧಕ ಮುದ್ದು ಮೂಡುಬೆಳ್ಳೆ, ಆಕಾಶವಾಣಿ ಕಾರ್ಯಕ್ರಮ ನಿರ್ವಾಹಕ ಡಾ. ಸದಾನಂದ ಪೆರ್ಲ, ಮುಸ್ಲಿಮ್ ಲೇಖಕರ ಸಂಘದ ಉಪಾಧ್ಯಕ್ಷ ಮುಹಮ್ಮದ್ ಅಲಿ ಪ್ರಶಸ್ತಿ ಪುರಸ್ಕೃತರ ಅಭಿನಂದನಾ ಭಾಷಣ ಮಾಡುವರು. ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ಸ್ನಾತಕೋತ್ತರ ಕೇಂದ್ರದ ಕ್ಯಾಂಪಸ್ ಡೈರೆಕ್ಟರ್ ಹಾಗೂ ಚೇರ್ಮನ್ ಡಾ. ಆಂಟೊನಿ ಪ್ರಕಾಶ್ ಮೊಂತೆರೋ ಸಂತ ಮದರ್ ತೆರೆಸಾ ಗುಣಗಾನ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಅರಣ್ಯ ಸಚಿವ ಬಿ.ರಮಾನಾಥ ರೈ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್, ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಶಕುಂತಳಾ ಟಿ. ಶೆಟ್ಟಿ, ಮಾಜಿ ಸಚಿವ ಕೆ.ಅಭಯಚಂದ್ರ ಜೈನ್, ವಿಧಾನಪರಿಷತ್ತಿನ ಸರಕಾರಿ ಮುಖ್ಯ ಸಚೇತಕ ಐವನ್ ಡಿಸೋಜ, ರಾಜ್ಯ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮ ಅಧ್ಯಕ್ಷ, ಬೆಳ್ತಂಗಡಿ ಶಾಸಕ ಕೆ.ವಸಂತ ಬಂಗೇರ, ವಿಧಾನಪರಿಷತ್ತು ಸದಸ್ಯ ಕೆ.ಪ್ರತಾಪಚಂದ್ರ ಶೆಟ್ಟಿ, ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಶಾಸಕ ಜೆ.ಆರ್.ಲೋಬೊ, ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ಶಾಸಕ ಮೊಯ್ದೀನ್ ಬಾವ, ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷ ಬಿ.ಎಚ್.ಖಾದರ್, ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯ ನಿರ್ದೇಶಕ ಡಾ. ರಘು, ದ.ಕ.ಜಿಲ್ಲಾ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷ ಇಬ್ರಾಹೀಂ ಕೋಡಿಜಾಲ್ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಬಂಟ್ವಾಳ ಬ್ಲಾಕ್ ಕಾಂಗ್ರಸ್ ಸಮಿತಿ ಅಧ್ಯಕ್ಷ ಮಾಯಿಲಪ್ಪ ಸಾಲಿಯಾನ್, ಬಂಟ್ವಾಳ ಎಪಿಎಂಸಿ ಅಧ್ಯಕ್ಷ ಪದ್ಮನಾಭ ರೈ, ಉಪಾಧ್ಯಕ್ಷ ಚಂದ್ರಶೇಖರ ಪೂಜಾರಿ, ಜಿಲ್ಲಾ ಪಂಚಾಯತ್ ಸದಸ್ಯರಾದ ಕೆ.ಪದ್ಮಶೇಖರ ಜೈನ್, ಚಂದ್ರಪ್ರಕಾಶ್ ಶೆಟ್ಟಿ, ಬುಡಾ ಮಾಜಿ ಅಧ್ಯಕ್ಷ ಪಿಯೂಸ್ ಎಲ್. ರೋಡ್ರಿಗಸ್ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News