ಬೆಳ್ತಂಗಡಿ: ಜಿಲ್ಲಾ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Update: 2017-02-25 18:51 GMT

ಬೆಳ್ತಂಗಡಿ, ೆ.25: ಸಂಘ ಪರಿವಾರ ಕರೆನೀಡಿದ್ದ ಜಿಲ್ಲಾ ಬಂದ್‌ಗೆ ತಾಲೂಕಿನಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ತಾಲೂಕಿನ ಬಹುತೇಕ ನಗರಪ್ರದೇಶಗಳಲ್ಲಿ ಅಂಗಡಿ ಮುಂಗಟ್ಟುಗಳು ಬಾಗಿಲು ಮುಚ್ಚಿದ್ದವು. ಖಾಸಗಿ ಬಸ್‌ಗಳು ರಸ್ತೆಗೆ ಇಳಿಯಲಿಲ್ಲ ಆದರೆ ಸರಕಾರಿ ಬಸ್‌ಗಳ ಸಂಚಾರ ಎಂದಿನಂತೆ ನಡೆಯಿತು. ದ್ವಿಚಕ್ರವಾಹನಗಳು ಹಾಗೂ ಖಾಸಗಿ ವಾಹನಗಳು ಎಂದಿನಂತೆ ಸಂಚರಿಸುತ್ತಿದ್ದವು ಆದರೆ ರಿಕ್ಷಾಗಳ ಸಂಚಾರ

ವಿರಳವಾಗಿತ್ತು. ಬೆಳ್ತಂಗಡಿ, ಉಜಿರೆ, ಗುರುವಾಯನಕೆರೆ, ವೇಣೂರು, ಮಡಂತ್ಯಾರುಗಳಲ್ಲಿ ಯಾವುದೇ ಅಂಗಡಿಗಳು ಬಾಗಿಲು ತೆರೆಯಲಿಲ್ಲ, ಶಾಲಾ ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು ಖಾಸಗಿ ಬಸ್‌ಗಳು ಇಲ್ಲದ ಕಾರಣ ಒಂದಿಷ್ಟು ತೊಂದರೆ ಅನುಭವಿಸಬೇಕಾಯಿತು, ಪ್ರಸಿದ್ಧ ಯಾತ್ರಾಕ್ಷೇತ್ರ ಧರ್ಮಸ್ಥಳದಲ್ಲಿ ಬಂದ್‌ಗೆ ಯಾವುದೇ ಬೆಂಬಲ ವ್ಯಕ್ತವಾಗಲಿಲ್ಲ. ಶಿವರಾತ್ರಿಯ ಹಿನ್ನೆಲೆಯಲ್ಲಿ ಕ್ಷೇತ್ರಕ್ಕೆ ಸಹಸ್ರಾರು ಭಕ್ತರು ಆಗಮಿಸಿದ್ದ ಹಿನ್ನೆಲೆ ಇಲ್ಲಿನ ಅಂಗಡಿಗಳು ಬಾಗಿ

ಲು ತೆರೆದಿದ್ದವು, ವಾಹನ ಸಂಚಾರ ಎಂದಿನಂತೆ ಇತ್ತು. ಗುರುವಾಯನಕೆರೆ ಸಮೀಪ ಬೆಳಗ್ಗೆ ಧರ್ಮಸ್ಥಳದಿಂದ ಮಂಗಳೂರಿಗೆ ಹೋಗುತ್ತಿದ್ದ ರಾಜ್ಯ ಸಾರಿಗೆ ಸಂಸ್ಥೆಯ ಬಸ್‌ಗೆ ಕಿಡಿಗೇಡಿಗಳು ಕಲ್ಲೆಸೆದ ಘಟನೆ ನಡೆದಿದ್ದು, ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಉಳಿದಂತೆ ತಾಲೂಕಿನಲ್ಲಿ ಯಾವುದೇ ಅಹಿತಕರಘಟನೆಗಳು ವರದಿಯಾಗಿಲ್ಲ. ಮಧ್ಯಾಹ್ನದ ಬಳಿಕ ಜನಜೀವನ ಸಹಜ ಸ್ಥಿತಿಗೆ ಮರಳಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News