ಕೆಪಿಸಿಸಿ ಕಚೇರಿಯಲ್ಲಿ ಸಮನ್ವಯ ಸಮಿತಿ ಸಭೆ ಆರಂಭ

Update: 2017-02-26 06:51 GMT

ಬೆಂಗಳೂರು, ಫೆ.26: ಕೆಪಿಸಿಸಿ ಕಚೇರಿಯಲ್ಲಿ ಇಂದು ಬೆಳಗ್ಗೆ ಕಾಂಗ್ರೆಸ್ ಸಮನ್ವಯ ಸಮಿತಿ ಸಭೆ ಆರಂಭಗೊಂಡಿದೆ.
ಅತ್ಯಂತದ ಮಹತ್ವದ ಸಮನ್ವಯ ಸಮಿತಿ ಸಭೆ ಕಾಂಗ್ರೆಸ್ ರಾಜ್ಯ ಉಸ್ತುವಾರಿ ದಿಗ್ವಿಜಯ್‌ ಸಿಂಗ್‌ ನೇತೃತ್ವದಲ್ಲಿ ನಡೆಯುತ್ತಿದ್ದು, ಮುಖ್ಯ ಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಹಾಗೂ  ಗೃಹಸಚಿವ ಡಾ.ಜಿ.ಪರಮೇಶ್ವರ , ರಾಜ್ಯಸಭಾ ಸದಸ್ಯ ಆಸ್ಕರ‍್ ಫೆರ್ನಾಂಡಿಸ್ ಮತ್ತಿತರ ನಾಯಕರು ಭಾಗವಹಿಸಿದ್ದಾರೆ.
ಸಭೆಯಲ್ಲಿ 11 ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ. 4 ವರ್ಷ ಪೂರ್ಣಗೊಳಿಸಿರುವ ಕೆಲವು ಸಚಿವರುಗಳಿಗೆ ಕೊಕ್‌ ವಿಚಾರ, ಮುಂಬರುವ ವಿಧಾನಸಭಾ ಚುನಾವಣೆ ಮತ್ತಿತರ ವಿಚಾರಗಳು  ಸಭೆಯಲ್ಲಿ ಚರ್ಚೆಗೆ ಬರಲಿದೆ. ಹೈಕಮಾಂಡ್‌ಗೆ ಹಣ ನೀಡಿರುವ ಡೈರಿ ಮಾಹಿತಿ ಬಹಿರಂಗಗೊಂಡ ಬೆನ್ನಲ್ಲೆ ಈ ಸಭೆ ನಡೆಯುತ್ತಿದೆ.
ನಿರಾಕರಣೆ: ರಾಷ್ಟ್ರೀಯ ಮಾಧ್ಯಮಗಳಲ್ಲಿ ಬಹಿರಂಗಗೊಂಡಿದ್ದ ಡೈರಿ ಮಾಹಿತಿ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಲು ಮುಖ್ಯ ಮಂತ್ರಿ ಸಿದ್ದರಾಮಯ್ಯ ನಿರಾಕರಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News