×
Ad

ಫರಂಗಿಪೇಟೆ: 10 ಜೋಡಿಗಳ ಸಾಮೂಹಿಕ ವಿವಾಹ

Update: 2017-02-26 23:39 IST

ಬಂಟ್ವಾಳ, ಫೆ.26: ಬಡವರು ಮತ್ತು ನಿರ್ಗತಿಕರಿಗೆ ನೆರವಾಗುವ ಮೂಲಕ ಅವರ ಬಾಳನ್ನು ಬೆಳಗಿಸುವ ಜವಾಬ್ದಾರಿ ಉಳ್ಳವರ ಹಾಗೂ ಸಮಾಜದಲ್ಲಿ ಜವಾಬ್ದಾರಿಯುತ ಸ್ಥಾನದಲ್ಲಿರುವವರ ಕರ್ತವ್ಯವಾಗಿದೆ ಎಂದು ಫರಂಗಿಪೇಟೆ ಜುಮಾ ಮಸೀದಿಯ ಖತೀಬ್ ಉಸ್ಮಾನ್ ದಾರಿಮಿ ಹೇಳಿದರು. ಫರಂಗಿಪೇಟೆಯ ಮುಹಿಯುದ್ದೀನ್ ಜುಮಾ ಮಸೀದಿಯ ಸಹಕಾರ ದೊಂದಿಗೆ ಇಲ್ಲಿನ ಖಿದ್ಮತುಲ್ ಇಸ್ಲಾಮ್ ಅಸೋಸಿಯೇಶನ್ ವತಿಯಿಂದ ಫರಂಗಿಪೇಟೆಯ ನೇತ್ರಾವತಿ ನದಿ ಕಿನಾರೆಯಲ್ಲಿ ರವಿವಾರ ನಡೆದ 10 ಜೋಡಿಗಳ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ರಾಜ್ಯ ಆಹಾರ ಸಚಿವ ಯು.ಟಿ.ಖಾದರ್ ಮಾತನಾಡಿ, ಸರ್ವರ ಸಹಕಾರ ಪಡೆದುಸಾಮೂಹಿಕ ವಿವಾಹವನ್ನು ಆಯೋಜಿ ಸುವ ಮೂಲಕ ಖಿದ್ಮತುಲ್ ಇಸ್ಲಾಮ್ ಅಸೋಸಿಯೇಶನ್ ಸಮಾಜಕ್ಕೆ ಅರ್ಥ ಪೂಣರ್ ಸಂದೇಶವನ್ನು ನೀಡಿದೆ ಎಂದರು.

ದ.ಕ. ಜಿಲ್ಲಾ ಖಾಝಿ ತ್ವಾಕ ಅಹ್ಮದ್ ಮುಸ್ಲಿಯಾರ್ ದುಆ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಫರಂಗಿಪೇಟೆ ಜುಮಾ ಮಸೀದಿಯ ಅಧ್ಯಕ್ಷ ಹಾಜಿ ಎಫ್.ಮುಹಮ್ಮದ್ ಬಾವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪಾಣಕ್ಕಾಡ್ ಶಮೀರ್ ಅಲಿ ತಂಙಳ್, ಗೇರು ಅಭಿವೃದ್ಧಿ ನಿಗಮದಅಧ್ಯಕ್ಷ ಬಿ.ಎಚ್.ಖಾದರ್, ರಾಜ್ಯಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಎ.ಗಫೂರ್, ಮನಪಾ ಆಯುಕ್ತ ಮುಹಮ್ಮದ್ ನಝೀರ್ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿ ದರು. ಕಾರ್ಯಕ್ರಮದಲ್ಲಿ ಬಿ.ಎ. ಸಮೂಹ ಸಂಸ್ಥೆಗಳ ಸ್ಥಾಪಕಾಧ್ಯಕ್ಷ ಡಾ.ಬಿ.ಅಹ್ಮದ್ ಹಾಜಿ ಮುಹಿಯುದ್ದೀನ್‌ರನ್ನು ಸನ್ಮಾನಿಸಿ ಗೌರವಿಸಲಾಯಿತು. ಎಂಜೆಎಂ ಫರಂಗಿಪೇಟೆ ಇದರ ಕಾರ್ಯದರ್ಶಿ ಹಾಜಿ ಎ.ಯೂಸುಫ್ ಅಲಂಕಾರ್, ಮಂಗಳೂರು ಹಿದಾಯ ಫೌಂಡೇಶನ್ ಅಧ್ಯಕ್ಷ ಹನೀಫ್ ಹಾಜಿ, ಎಸ್‌ಡಿಪಿಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಹನೀಫ್ ಖಾನ್ ಕೋಡಾಜೆ, ಜಿಪಂ ಶಿಕ್ಷಣ ಸ್ಥಾಯಿ ಸಮಿತಿಯ ಅಧ್ಯಕ್ಷ ಕೆ.ಕೆ.ಶಾಹುಲ್ ಹಮೀದ್, ಅರಫಾ ಗ್ರೂಪ್ ತುಂಬೆಯ ಅಬ್ದುಲ್ಲತೀಫ್, ಫರಂಗಿಪೇಟೆ ರಾಜಧಾನಿ ಜ್ಯುವೆಲ್ಲರ್ಸ್‌ನಶುಕೂರ್, ಉದ್ಯಮಿಗಳಾದ ಅಬ್ದಲ್ ಮೋನು, ಅಬ್ದುರ್ರಶೀದ್, ಮಂಗಳೂರು ಫಿಶ್ ಮರ್ಚೆಂಟ್‌ನ ಇಸ್ಮಾಯೀಲ್ ಕೆಇಎಲ್, ಕಣ್ಣೂರು ಅಶೋಕ್ ಬೀಡಿಯ ಹಾಜಿ ಮುಹಮ್ಮದ್, ವಳಿಬೈಲ್ ಜುಮಾ ಮಸೀದಿಯ ಗೌರವಾಧ್ಯಕ್ಷ ಝಫರುಲ್ಲಾ ಒಡೆಯರ್, ಸಲೀಂ ಟೈಲರ್ ಫರಂಗಿಪೇಟೆ, ಬೈಕಂಡಿ ಚಿಕನ್ ಸ್ಟಾಲ್‌ನ ಹಂಝ, ಮಾಹಿನ್ ದಾರಿಮಿ ಪಾತೂರು, ಮಂಗಳೂರು ಟಿಆರ್‌ಎಫ್ ಗೌರವ ಸಲಹೆಗಾರ ರಫೀಕ್ ಮಾಸ್ಟರ್, ಝುಬೈರ್ ಸಜಿಪಪಡು, ಬಿ.ಕೆ.ಇದಿನಬ್ಬ ಮೊದಲಾದವರು ಉಪಸ್ಥಿತರಿದ್ದರು. ಜಿಪಂ ಮಾಜಿ ಸದಸ್ಯ ಎಫ್.ಉಮರ್ ಫಾರೂಕ್ ಪ್ರಾಸ್ತಾವಿಸಿ, ಸ್ವಾಗತಿಸಿದರು. ಅಬ್ದುಲ್ ಹಮೀದ್ ಗೋಳ್ತಮಜಲು ವಂದಿಸಿದರು. ಉಪನ್ಯಾಸಕ ಅಬ್ದುಲ್ ರಝಾಕ್ ಅನಂತಾಡಿ ಕಾರ್ಯಕ್ರಮ ನಿರೂಪಿಸಿ ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News