ಕ್ರಿಮಿನಾಶಕ ಸೇವಿಸಿದ್ದ ವಿದ್ಯಾರ್ಥಿನಿ ಮೃತ್ಯು
Update: 2017-02-27 15:53 IST
ಬಂಟ್ವಾಳ, ಫೆ. 27: ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ರವಿವಾರ ವಿಟ್ಲ ಪೊಲೀಸ್ ಠಾಣೆ ವ್ಯಾಪ್ತಿಯ ಕಂಬಳಬೆಟ್ಟು ಎಂಬಲ್ಲಿ ನಡೆದಿದೆ.
ಮಾಣಿ ಸಮೀಪದ ನೇರಳಕಟ್ಟೆ ನಿವಾಸಿ ಫಾಯಿಝಾ(15) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಈಕೆ ಮಾಣಿ ಕರ್ನಾಟಕ ಪ್ರೌಢ ಶಾಲೆಯ 9ನೆ ತರಗತಿಯ ವಿದ್ಯಾರ್ಥಿನಿಯಾಗಿದ್ದು ವಾರದ ಹಿಂದೆ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು ಮನೆಯವರು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು.
ಚಿಕಿತ್ಸೆಗೆ ಸ್ಪಂದಿಸದ ಕಾರಣ ವಿದ್ಯಾರ್ಥಿನಿಯನ್ನು ವಿಟ್ಲ ಪೊಲೀಸ್ ಠಾಣೆ ವ್ಯಾಪ್ತಿಯ ಕಂಬಳಬೆಟ್ಟು ಮನೆಗೆ ವಾಪಸ್ ಕರೆತರಲಾಗಿತ್ತು ಎಂದು ತಿಳಿದು ಬಂದಿದೆ. ಆಕೆ ಇಂದು ಮನೆಯಲ್ಲಿ ಕೊನೆಯುಸಿರೆಳೆದಿದ್ದು ಪ್ರೇಮ ವೈಫಲ್ಯವೇ ಕ್ರಿಮಿನಾಶಕ ಸೇವೆನೆಗೆ ಕಾರಣ ಎಂದು ಹೇಳಲಾಗಿದೆ.