ಉಳ್ಳಾಲ: ಎಸ್ಸೆಸ್ಸೆಫ್ ಮುಕ್ಕಚ್ಚೇರಿ ಶಾಖೆಯ ದಶ ವಾರ್ಷಿಕ ಸಂಭ್ರಮದ ಅಂಗವಾಗಿ ಹಣ್ಣು ಹಂಪಲು ವಿತರಣೆ
ಎಸ್ಸೆಸ್ಸೆಫ್ ಉಳ್ಳಾಲ ಮುಕ್ಕಚ್ಚೇರಿ ಶಾಖೆಯ ದಶ ವಾರ್ಷಿಕ ಸಂಭ್ರಮದ ಅಂಗವಾಗಿ ರಿಫಾಯೀ ಶೈಖ್ ಸ್ಮರಣಾರ್ಥ ಹಣ್ಣು ಹಂಪಲು ವಿತರಣೆ ಮತ್ತು ಮುಕ್ಕಚ್ಚೇರಿ ಮದ್ರಸ ಮಸೀದಿ ಹಾಗು ಸುನ್ನತ್ ಜಮಾಅತಿನ ಸರ್ವತೋಮುಖ ಅಭಿವ್ರದ್ಧಿಗಾಗಿ ದುಡಿದು ಮರಣಹೊಂದಿದವರ ಮೇಲೆ ತಹ್ಲೀಲ್ ಸಮರ್ಪಣಾ ಕಾರ್ಯಕ್ರಮ ಶಾಖಾಧ್ಯಕ್ಷ ಅಹ್ಸನ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.
ಎಸ್ಸೆಸ್ಸೆಫ್ ಉಳ್ಳಾಲ ಸೆಕ್ಟರ್ ಅಧ್ಯಕ್ಷ ಸಯ್ಯಿದ್ ಖುಬೈಬ್ ತಂಗಳ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಮುಕ್ಕಚ್ಚೇರಿ ಜುಮಾ ಮಸೀದಿಯ ಮುದರ್ರಿಸ್ ಸ್ವಾದಿಖ್ ಸಖಾಫಿ ಕರಿಂಬಿಲ ಅನುಸ್ಮರಣಾ ಪ್ರಭಾಷಣ ಮಾಡಿದರು. ಎಸ್ಸೆಸ್ಸೆಫ್ ಉಳ್ಳಾಲ ಡಿವಿಷನ್ ಅಧ್ಯಕ್ಷ ಮುನೀರ್ ಅಹ್ಮದ್ ಕಾಮಿಲ್ ಸಖಾಫಿ ಉಳ್ಳಾಲ ಹಾಗು ಮುಕ್ಕಚ್ಚೇರಿ ಜುಮಾ ಮಸೀದಿಯ ಇಮಾಮರಾದ ಅಬ್ದುರ್ರಹ್ಮಾನ್ ಸಅದಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಮನೆ ಮನೆಗೆ ಭೇಟಿ ನೀಡಿ ಹಣ್ಣು ಹಂಪಲು ವಿತರಣೆ ಹಾಗು ತಹ್ಲೀಲ್ ಸಮರ್ಪಣೆ ನಿರ್ವಹಿಸಲಾಯಿತು. ಎಸ್ಸೆಸ್ಸೆಫ್ ಮೇಲಂಗಡಿ ಶಾಖಾಧ್ಯಕ್ಷ ಜಮಾಲ್ ಉಸ್ತಾದ್ ದುವಾ ಕಾರ್ಯಕ್ರಮಕ್ಕೆ ನೇತ್ರತ್ವ ನೀಡಿದರು.
ಈ ಸಂದರ್ಭದಲ್ಲಿ ಎಸ್ ವೈ ಎಸ್ ಉಳ್ಳಾಲ ಸೆಂಟರ್ ಸಂಚಾಲಕ ಅಶ್ರಫ್ ಹಾಜಿ ಬಳ್ಳಾರಿ, ಎಸ್ ವೈ ಎಸ್ ಉಳ್ಳಾಲ ಸೆಂಟರ್ ಉಪಾಧ್ಯಕ್ಷ ತ್ವಾಹಿರ್ ಹಾಜಿ, ಮುಕ್ಕಚ್ಚೇರಿ ಮದ್ರಸ ಅಧ್ಯಾಪಕ ಅಬ್ದುಲ್ ಖಾದರ್ ಮದನಿ, ಎಸ್ಸೆಸ್ಸೆಫ್ ಉಳ್ಳಾಲ ಸೆಕ್ಟರ್ ಪ್ರಧಾನ ಕಾರ್ಯದರ್ಶಿ ಮುಝಮ್ಮಿಲ್ ಕೋಟೆಪುರ ಮುಕ್ಕಚ್ಚೇರಿ ಜುಮಾ ಮಸೀದಿ ಅಧ್ಯಕ್ಷ ಇಸ್ಮಾಯಿಲ್ ಹಾಗು ಎಸ್ಸೆಸ್ಸೆಫ್ ಕಾರ್ಯಕರ್ತರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.