×
Ad

ಮಂಗಳೂರು: ಬಂದ್‌ನಿಂದಾದ ನಷ್ಟ ಭರಿಸಲು ಕಾಂಗ್ರೆಸ್ ಆಗ್ರಹ

Update: 2017-02-27 20:44 IST

ಮಂಗಳೂರು, ಫೆ.27: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ರ ಮಂಗಳೂರು ಭೇಟಿಯನ್ನು ವಿರೋಧಿಸಿ ಕೋಮುವಾದಿ ಸಂಘಟನೆಗಳು ದ.ಕ.ಜಿಲ್ಲಾ ಬಂದ್‌ಗೆ ಕರೆ ನೀಡಿರುವುದರಿಂದ ಕೋಟ್ಯಂತರ ರೂ. ನಷ್ಟವಾಗಿದೆ. ಹಾಗಾಗಿ ಈ ನಷ್ಟದ ಹಣವನ್ನು ಬಂದ್‌ಗೆ ಕರೆ ನೀಡಿದವರಿಂದಲೇ ವಸೂಲಿ ಮಾಡಬೇಕು ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷ ಇಬ್ರಾಹೀಂ ಕೋಡಿಜಾಲ್ ಜಿಲ್ಲಾಡಳಿತವನ್ನು ಆಗ್ರಹಿಸಿದ್ದಾರೆ.

ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಂದ್‌ನಿಂದಾಗಿ ವಿದ್ಯಾರ್ಥಿಗಳು, ಸಾರ್ವಜನಿಕರಿಗೆ ಅನೇಕ ಸಮಸ್ಯೆಗಳು ಎದುರಾದವು. ಹಲವು ಬಸ್‌ಗಳಿಗೆ ಕಲ್ಲೆಸೆದು ಹಾನಿಗೊಳಿಸಲಾಗಿದೆ. ಬಂದ್‌ಗೆ ಕರೆ ನೀಡಿದವರಿಂದಲೇ ನಷ್ಟ ಹಣ ವಸೂಲಿ ಮಾಡಬೇಕೆಂಬ ಸುಪ್ರೀಂ ಕೋರ್ಟ್‌ನ ಆದೇಶದಂತೆ ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ದ.ಕ. ಜಿಲ್ಲೆ ಸ್ಮಾರ್ಟ್‌ಸಿಟಿಯಾಗುತ್ತಿದೆ. ಆದರೆ ಕೇವಲ ಅಭಿವೃದ್ಧಿಯಿಂದ ಸ್ಮಾರ್ಟ್‌ಸಿಟಿ ಆಗಲು ಸಾಧ್ಯವಿಲ್ಲ. ಪರಸ್ಪರ ಸಾಮರಸ್ಯವೂ ಅಗತ್ಯವಾಗಿ ಬೇಕಾಗುತ್ತದೆ ಎಂದು ಇಬ್ರಾಹೀಂ ಕೋಡಿಜಾಲ್ ಅಭಿಪ್ರಾಯಪಟ್ಟರು.

ಚುನಾವಣೆಗೆ ಇನ್ನೂ 1 ವರ್ಷವಿದ್ದರೂ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ತಾನೇ ಸಿಎಂ ಎನ್ನುವ ರೀತಿಯಲ್ಲಿ ಮಾತನಾಡುತ್ತಿದ್ದಾರೆ. ರಾಜ್ಯದ ಇತಿಹಾಸದಲ್ಲೇ ಜೈಲಿಗೆ ಹೋಗಿ ಬಂದ ಏಕೈಕ ಮುಖ್ಯಮಂತ್ರಿ ಅವರು. ಅಂತಹವರು ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿರುವುದು ಹಾಸ್ಯಾಸ್ಪದ ಎಂದು ಇಬ್ರಾಹಿಂ ಕೋಡಿಜಾಲ್ ಟೀಕಿಸಿದರು.

 ಜಿಪಂ ಸದಸ್ಯರಾದ ಎಂ.ಎಸ್.ಮುಹಮ್ಮದ್, ಮಮತಾ ಗಟ್ಟಿ, ಶಾಹುಲ್ ಹಮೀದ್, ಕಾರ್ಪೊರೇಟರ್ ಅಪ್ಪಿ, ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಹರ್ಷರಾಜ್ ಮುದ್ಯ, ಶರ್ೀ ದೇರಳಕಟ್ಟೆ, ನಝೀರ್ ಬಜಾಲ್ ಉಪಸ್ಥಿತರಿದ್ದರು.


ಮಾ.1: ಕಾಂಗ್ರೆಸ್ ಭವನದಲ್ಲಿ ಕಾರ್ಯಾಗಾರ: 

 ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಱಗ್ರಾಮಸ್ವರಾಜ್ ಜಾಗೃತಿ ಅಭಿಯಾನೞದ ಅಂಗವಾಗಿ ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಪ್ರತಿನಿಧಿಗಳ ಕಾರ್ಯಾಗಾರ ಮಾ. 1ರಂದು ಅಪರಾಹ್ನ 2 ಗಂಟೆಗೆ ನಗರದ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ನಡೆಯಲಿದೆ ಎಂದು ದ.ಕ. ಜಿಪ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್ ಕೆ.ಕೆ. ಹೇಳಿದರು.
 
ಸೋಮವಾರ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕಾರ್ಯಾಗಾರದಲ್ಲಿ ಮೂರು ಪ್ರಮುಖ ಅಧಿವೇಶನಗಳನ್ನು ಹಮ್ಮಿಕೊಳ್ಳಲಾಗಿದೆ. ಮೊದಲ ಅಧಿವೇಶನದಲ್ಲಿ ಕಾಂಗ್ರೆಸ್ ತತ್ವ ಸಿದ್ಧಾಂತ ಮತ್ತು ಪಂಚಾಯತ್ ರಾಜ್ ವ್ಯವಸ್ಥೆಗೆ ಕಾಂಗ್ರೆಸ್ ಪಕ್ಷದ ಕೊಡುಗೆ, 2ನೆ ಅಧಿವೇಶನ,ದಲ್ಲಿ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯ್ದೆ 1993 ಮತ್ತು ರಮೇಶ್ ಕುಮಾರ್ ವರದಿ, 3ನ ಅಧಿವೇಶನದಲ್ಲಿ ಅಧಿಕಾರ ವಿಕೇಂದ್ರೀಕರಣ ಮತ್ತು ಹಣಕಾಸು ವಿಷಯದಲ್ಲಿ ಕಾರ್ಯಾಗಾರ ನಡೆಯಲಿದೆ ಎಂದು ವಿವರಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News