ಆನೇಕಲ್: ಮರಕ್ಕೆ ಬೈಕ್ ಢಿಕ್ಕಿ ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು
Update: 2017-02-28 15:48 IST
ಆನೇಕಲ್, ಫೆ.28: ಮರಕ್ಕೆ ಬೈಕ್ ಢಿಕ್ಕಿ ಹೊಡೆದು ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಮೃತಪಟ್ಟು, ಹಿಂಬದಿ ಕುಳಿತಿದ್ದ ಸವಾರ ತೀವ್ರ ಗಾಯಗೊಂಡ ಘಟನೆ ಆನೇಕಲ್ ಮುಖ್ಯರಸ್ತೆಯ ಬ್ಯಾಗಡದೇನಹಳ್ಳಿ ಗೇಟ್ ಬಳಿ ಮಂಗಳವಾರ ನಡೆದಿದೆ.
ತಮಿಳುನಾಡು ಮೂಲದ ರೂಪನ್, ಮೃತ ವಿದ್ಯಾರ್ಥಿ. ಗಾಯಗೊಂಡ ಇನ್ನೋರ್ವ ವಿದ್ಯಾರ್ಥಿಯನ್ನು ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಮೃತ ಮತ್ತು ಗಾಯಾಳು ಆನೇಕಲ್ ಅಲಯನ್ಸ್ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು.
ಆನೇಕಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.