×
Ad

ಮುಲ್ಕಿ: ಬಪ್ಪನಾಡು ಸೇತುವೆಯಿಂದ ಹಾರಿ ಆತ್ಮಹತ್ಯೆ

Update: 2017-02-28 22:28 IST

ಮುಲ್ಕಿ, ಫೆ.28: ರಾಷ್ಟ್ರೀಯ ಹೆದ್ದಾರಿ 66ರ ಬಪ್ಪನಾಡು ಸೇತುವೆಯಿಂದ ಹಾರಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ಸಂಜೆ ವೇಳೆಗೆ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಸ್ಥಳೀಯ ನಿವಾಸಿ ಭಾಸ್ಕರ ಕರ್ಕೆರ(65) ಎಂದು ಗುರುತಿಸಲಾಗಿದೆ.

ಮೃತ ವ್ಯಕ್ತಿ ಮುಲ್ಕಿ ಬಸ್ಸು ನಿಲ್ದಾಣದ ಬಳಿ ಕೆಲ ವರ್ಷಗಳ ಹಿಂದೆ ತರಕಾರಿ ವ್ಯಾಪಾರ ನಡೆಸುತ್ತಿದ್ದರು. ಬಳಿಕ ಅನಾರೋಗ್ಯದ ನಿಮಿತ್ತ ಮನೆಯಲ್ಲೇ ಇದ್ದರು ಎನ್ನಲಾಗಿದೆ. ಮಂಗಳವಾರ ಸಂಜೆ ಸುಮಾರು 3 ಗಂಟೆ ಹೊತ್ತಿಗೆ ಮುಲ್ಕಿ ಬಪ್ಪನಾಡು ಸೇತುವೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಸ್ಥಳೀಯರು ಶಂಕೆ ವ್ಯಕ್ತ ಪಡಿಸಿದ್ದಾರೆ.

ಅರ್ದಗಂಟೆಯಲ್ಲಿ ಸ್ಥಳೀಯರಿಗೆ ಶವ ಮೇಲೆ ತೇಲುತ್ತಿದ್ದುದು ತಿಳಿದು ಬಂದಿದ್ದು ಕೂಡಲೇ ಪೊಲೀಸರಿಗೆ ತಿಳಿಸಿದ್ದಾರೆ.

ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಮೂಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News