×
Ad

ಉಡುಪಿ: ಮಾ.1ರಂದು ಗ್ರಾಮ ಸ್ವರಾಜ್ ಜಾಗೃತಿ ಅಭಿಯಾನ

Update: 2017-02-28 23:02 IST

ಉಡುಪಿ, ಫೆ.28: ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ರಾಜೀವ್ ಗಾಂಧಿ ಪಂಚಾಯತ್‌ರಾಜ್ ಸಂಘಟನೆ ಉಡುಪಿ ಇವರ ಜಂಟಿ ಆಶ್ರಯದಲ್ಲಿ ಗ್ರಾಮ ಸ್ವರಾಜ್ ಜಾಗೃತಿ ಅಭಿಯಾನವನ್ನು ನಾಳೆ ಮಾ.1ರಂದು ಬೆಳಗ್ಗೆ 10:00 ಗಂಟೆಗೆ ಬ್ರಹ್ಮಗಿರಿ ಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ಕಾರ್ಯಾಗಾರವನ್ನು ರಾಜ್ಯ ಮೀನುಗಾರಿಕೆ, ಯುವಜನ ಸೇವೆ, ಕ್ರೀಡೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಉದ್ಘಾಟಿಸಲಿದ್ದು, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹಾಗೂ ಕೆ.ಎಸ್.ಆರ್.ಟಿ.ಸಿ. ನಿಗಮದ ಅಧ್ಯಕ್ಷರೂ ಆದ ಕೆ.ಗೋಪಾಲ್ ಪೂಜಾರಿ, ಮಾಜಿ ಸಚಿವ ಹಾಗೂ ಕಾಪು ಶಾಸಕ ವಿನಯ ಕುಮಾರ್ ಸೊರಕೆ, ವಿಧಾನ ಪರಿಷತ್ ಸದಸ್ಯರಾದ ಕೆ.ಪ್ರತಾಪಚಂದ್ರ ಶೆಟ್ಟಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಎ.ಗಫೂರ್, ಮಾಜಿ ಸಭಾಪತಿ ಬಿ.ಎಲ್. ಶಂಕರ್, ವಿ.ಆರ್.ಸುದರ್ಶನ್, ಹಿರಿಯ ನಾಯಕ ರಾದ ನಾರಾಯಣ್ ಸ್ವಾಮಿ, ಗೋಪಾಲ್ ಭಂಡಾರಿ, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ವೆರೋನಿಕ ಕರ್ನೇಲಿಯೊ, ಪಂಚಾಯತ್‌ರಾಜ್ ಸಂಘಟನೆಯ ರಾಜ್ಯ ಸಂಚಾಲಕ ಬಿ.ಎಂ. ಸಂದೀಪ್, ವಲಯ ಸಂಚಾಲಕ ರಂಗಸ್ವಾಮಿ ಹಾಗೂ ಪವನ್ ಗಾಂಧಿ ಹಾಗೂ ಇತರ ನಾಯಕರು ಭಾಗವಹಿಸಲಿದ್ದಾರೆ.

ಈ ಶಿಬಿರದಲ್ಲಿ ಆರ್‌ಜಿಪಿಆರ್‌ಎಸ್‌ನ ಸಂಯೋಜಕರು, ಬ್ಲಾಕ್ ಕಾಂಗ್ರೆಸ್/ಮಹಿಳಾ ಕಾಂಗ್ರೆಸ್ ಅಧ್ಯಕ್ಷರು, ಜಿಪಂ ಹಾಗೂ ತಾಪಂ ಸದಸ್ಯರು ಹಾಗೂ ಅಭ್ಯರ್ಥಿಗಳು, ವಿವಿಧ ನಾಮ ನಿರ್ದೇಶಿತ ಸದಸ್ಯರುಗಳು, ಗ್ರಾಪಂ ಅಧ್ಯಕ್ಷರು ಮತ್ತು ಸದಸ್ಯರುಗಳು ಪಾಲ್ಗೊಳ್ಳಲಿದ್ದಾರೆ. ಕಾಂಗ್ರೆಸ್ ಅಭಿಮಾನಿಗಳು ಹಾಗೂ ಆಸಕ್ತ ಕಾರ್ಯಕರ್ತರು ತರಬೇತಿಯಲ್ಲಿ ಭಾಗವಹಿಸುವಂತೆ ಆರ್‌ಜಿಪಿಆರ್‌ಎಸ್ ಉಡುಪಿ ಜಿಲ್ಲಾ ಸಂಯೋಜಕ ರೋಶನಿ ಒಲಿವರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News