ಮಂಗಳೂರು: ವೈದ್ಯರಿಂದ ಅರ್ಜಿ ಆಹ್ವಾನ
Update: 2017-02-28 23:08 IST
ಮಂಗಳೂರು, ಫೆ.28: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಪರಿಷ್ಕೃತ ರಾಷ್ಟ್ರೀಯ ಕ್ಷಯ ನಿಯಂತ್ರಣ ಕಾರ್ಯಕ್ರಮದಡಿ ಗುತ್ತಿಗೆ ಆಧಾರದಲ್ಲಿ ಡಿ.ಆರ್.ಟಿ.ಬಿ. ಸೆಂಟರ್ 1 ವರ್ಷದ ಅವಧಿಗೆ ಹಿರಿಯ ವೈದ್ಯಾಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನಿಸಿದೆ.
ಅರ್ಹ ಅಭ್ಯರ್ಥಿಗಳು ಮಾ.2ರಂದು ಅಪರಾಹ್ನ 2:30ಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿ ನಡೆಯವ ಸಂದರ್ಶನದಲ್ಲಿ ಅಗತ್ಯ ಮೂಲ ದಾಖಲೆಗಳೊಂದಿಗೆ ಹಾಜರಾಗುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಪ್ರಕಟನೆ ತಿಳಿಸಿದೆ.