ಮಂಗಳೂರು: ಮಾ.1ರಂದು ಪರಿಶೀಲನಾ ಸಭೆ
Update: 2017-02-28 23:22 IST
ಮಂಗಳೂರು, ಫೆ.28: ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ಕಾರ್ಯಕ್ರಮದಡಿ ಚರ್ಚ್ ದುರಸ್ಥಿ/ನವೀಕರಣ, ಸಮುದಾಯ ಭವನ ನಿರ್ಮಾಣ/ ಅನಾಥಾಶ್ರಮ ಹಾಗೂ ವೃದ್ಧಾಶ್ರಮಗಳಿಗೆ ಅನುದಾನ ಮಂಜೂರಾತಿ ಕೋರಿ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಪರಿಶೀಲನಾ ಸಭೆಯು ಮಾ.1ರಂದು ಅಪರಾಹ್ನ 3ಕ್ಕೆ ಪಾಂಡೇಶ್ವರ ಓಲ್ಡ್‌ಕೆಂಟ್ ರಸ್ತೆಯ ಮೌಲನಾ ಅಝಾದ್ ಭವನದಲ್ಲಿ ಸರಕಾರಿ ಮುಖ್ಯ ಸಚೇತಕ ಹಾಗೂ ಕ್ರಿಶ್ಚಿಯನ್ ಅಭಿವೃಧ್ಧಿ ಸಮಿತಿಯ ಉಪಾಧ್ಯಕ್ಷ ಐವನ್ ಡಿಸೋಜರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳ ಕಚೇರಿ ಪ್ರಕಟನೆ ತಿಳಿಸಿದೆ.