×
Ad

ಮಧು ಬಂಗಾರಪ್ಪರನ್ನು ಸೆಳೆಯಲು ಕಾಂಗ್ರೆಸ್ ಕಸರತ್ತು

Update: 2017-03-01 13:49 IST

 ಶಿವಮೊಗ್ಗ, ಮಾ.1: ಸೊರಬದ ಜೆಡಿಎಸ್ ಶಾಸಕ ಮಧು ಬಂಗಾರಪ್ಪರನ್ನು ಪಕ್ಷಕ್ಕೆ ಸೆಳೆಯಲು ಇಬ್ಬರು ಪ್ರಭಾವಿ ಸಚಿವರ ಮೂಲಕ ಕಾಂಗ್ರೆಸ್ ಕಸರತ್ತು ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.

 ಕುಮಾರ ಬಂಗಾರಪ್ಪ ಬಿಜೆಪಿ ಸೇರಲು ವೇದಿಕೆ ಸಿದ್ಧವಾಗಿದೆ. ಈ ಹಿನ್ನೆಲೆಯಲ್ಲಿ ಸೊರಬ ತಾಲೂಕಿನಲ್ಲಿ ಕಾಂಗ್ರೆಸ್‌ನ್ನು ಬಲಪಡಿಸುವ ಉದ್ದೇಶದಿಂದ ಮಧು ಬಂಗಾರಪ್ಪರನ್ನು ಪಕ್ಷಕ್ಕೆ ಸೆಳೆದುಕೊಳ್ಳಲು ಕಾಂಗ್ರೆಸ್ ರಣತಂತ್ರ ರೂಪಿಸುತ್ತಿದೆ ಎನ್ನಲಾಗಿದೆ. ಜಿಲ್ಲೆಯ ಹಿರಿಯ ಮುಖಂಡ, ಕಂದಾಯ ಸಚಿವರಾದ ಕಾಗೋಡು ತಿಮ್ಮಪ್ಪ ಅವರು ಮಧು ಅವರನ್ನು ಕಾಂಗ್ರೆಸ್‌ಗೆ ಕರೆತರಲು ನೇತೃತ್ವವಹಿಸಿದ್ದು, ಡಿಕೆ ಶಿವಕುಮಾರ್ ಅವರಿಗೆ ಸಾಥ್ ನೀಡುತ್ತಿದ್ದಾರೆ. ಮಧು ಕಾಂಗ್ರೆಸ್ ಪಕ್ಷದ ಸಂಪರ್ಕದಲ್ಲಿದ್ದಾರೆ. ಸದ್ಯ ವಿದೇಶ ಪ್ರವಾಸದಲ್ಲಿರುವ ಮಧು ಗುರುವಾರ ಭಾರತಕ್ಕೆ ವಾಪಸಾಗಲಿದ್ದಾರೆ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News