ಮೂಡುಬಿದಿರೆ: ರೋಟರಿಯಿಂದ ಕೆರೆಗಳ ಅಭಿವೃದ್ಧಿಗೆ ಚಾಲನೆ
Update: 2017-03-01 21:33 IST
ಮೂಡುಬಿದಿರೆ, ಮಾ.1: ಮೂಡುಬಿದಿರೆಯ 18 ಕೆರೆಗಳಲ್ಲಿ ಪಾಳು ಬಿದ್ದಿರುವ ಕೆರೆಗಳನ್ನು ಅಭಿವೃದ್ಧಿಪಡಿಸಿ ಅಂತರ್ಜಲವನ್ನು ಹೆಚ್ಚಿಸುವ ರೋಟೋಲೇಕ್ಸ್‌ಯೋಜನೆಯನ್ನು ರೋಟರಿ ಚಾರಿಟೇಬಲ್ ಟ್ರಸ್ಟ್ ಹಮ್ಮಿಕೊಂಡಿದ್ದು ಮೊಹಲ್ಲಾ ಕೆರೆಯನ್ನು ಹೂಳೆತ್ತಿ ಅಭಿವೃದ್ಧಿ ಪಡಿಸುವ ಕಾರ್ಯಕ್ಕೆ ಬುಧವಾರ ಚಾಲನೆ ನೀಡಲಾಯಿತು.
ರೋಟರಿ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷ ಡಾ. ಮುರಳೀಕೃಷ್ಣ ಕಾಮಗಾರಿಗೆ ಚಾಲನೆ ನೀಡಿದರು.
ಪುರಸಭಾ ಸದಸ್ಯ ಪಿ.ಕೆ. ಥೋಮಸ್, ರೋಟರಿ ಕ್ಲಬ್ ಅಧ್ಯಕ್ಷ ಮಹಮ್ಮದ್ ಶರೀಫ್, ಮೂಡುಬಿದಿರೆ ಜಲ ಸಂರಕ್ಷಣಾ ಸಮಿತಿಯ ಗೌರವಾಧ್ಯಕ್ಷ ಡಾ. ಎಲ್. ಸಿ. ಸೋನ್ಸ್, ಮೂಡಾದ ಮಾಜಿ ಅಧ್ಯಕ್ಷ ಸುರೇಶ್ ಕೋಟ್ಯಾನ್, ಪುರಸಭಾ ಸದಸ್ಯ ಅಬ್ದುಲ್ ಬಶೀರ್, ರೋಟರಿ ಚಾರಿಟೇಬಲ್ ಟ್ರಸ್ಟ್‌ನ ಕಾರ್ಯದರ್ಶಿ ಡಾ. ಹರೀಶ್ ನಾಯಕ್, ರೋಟರಿ ಕ್ಲಬ್ ಕಾರ್ಯದರ್ಶಿ ಡಾ. ಸುದೀಪ್, ಇನ್ನಲ್ ವೀಲ್ ಕ್ಲಬ್‌ನ ಅಧ್ಯಕ್ಷೆ ಡಾ. ಸೀಮಾ ಸುದೀಪ್, ಸ್ಥಳೀಯರಾದ ಮಕ್ಬೂಲ್ ಹುಸೇನ್, ಖಾದರ್ ಸಾಹೇಬ್ ಉಪಸ್ಥಿತರಿದ್ದರು.